ಪ್ರಜ್ವಲ್ ರೇವಣ್ಣ ನೀಚ ಕೃತ್ಯ ಸಹಿಸಲ್ಲ

ex home minister Araga gnanendra
ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದರು.
Published on

ಶಿವಮೊಗ್ಗ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಾಡಿದ್ದು ನೀಚಕೃತ್ಯ. ಅದನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ ಮತ್ತು ಸಮರ್ಥನೆ ಕೂಡ ಮಾಡುವುದಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಸ್ವತಃ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೇ ಹೇಳಿದ್ದಾರೆ. ನಾವೂ ಕೃತ್ಯವನ್ನು ಸಮರ್ಥನೆ ಮಾಡಿಕೊಂಡಿಲ್ಲ. ಸಮರ್ಥನೆ ಮಾಡಿಕೊಳ್ಳುವುದೂ ಇಲ್ಲ. ನೀಚ ಕೃತ್ಯವನ್ನು ನಾವೂ ಖಂಡಿಸುತ್ತೇವೆ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದತಿಗೆ ಅದರದ್ದೇ ಆದ ಕಾನೂನು ಪ್ರಕ್ರಿಯೆ ಇದೆ. ಎರಡು ದಿನದ ಹಿಂದೆ ಕೇಂದ್ರ ಸಚಿವ ಎಸ್.ಜೈಶಂಕರ್ ಪಾಸ್‌ಪೋರ್ಟ್ ರದ್ದು ಮಾಡುವುದಾಗಿ ಹೇಳಿಕೆ ಕೊಟ್ಟಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡ ಖಂಡಿಸಿದ್ದು ಪ್ರಜ್ವಲ್ ಅವರನ್ನು ಬಂಧಿಸುವುದು ರಾಜ್ಯ ಸರ್ಕಾರದ ಕೆಲಸ. ಒಂದು ವಾರದ ಮುಂಚಿತವಾಗಿಯೇ ಅಶ್ಲೀಲ ವಿಡಿಯೋ ಮಾಹಿತಿ ಇದ್ದರೂ ಅವರನ್ನು ವಿದೇಶಕ್ಕೆ ತೆರಳಲು ಬಿಟ್ಟಿದ್ದು ಸರಿಯಲ್ಲ. ಪಾಸ್‌ಪೋರ್ಟ್ ರದ್ದತಿಗೆ ಸಿಎಂ ಕೇಂದ್ರಕ್ಕೆ ಪತ್ರ ಬರೆಯುವ ಅವಶ್ಯಕತೆಯೇ ಇರಲಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net