ಪ್ರಕಾಶ್ ಆಚಾರ್ಯ ನಗರ ಕಾಂಗ್ರೆಸ್ ಅಧ್ಯಕ್ಷ

PRAKASH ACHARYA
Published on

ಮಡಿಕೇರಿ: ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಎ.ಎಸ್.ಪ್ರಕಾಶ್ ಆಚಾರ್ಯ ಆಯ್ಕೆಯಾಗಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅವರು ಪ್ರಕಾಶ್ ಆಚಾರ್ಯ ಅವರಿಗೆ ಆದೇಶ ಪತ್ರ ನೀಡಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಪ್ರಧಾನ ಕಾರ್ಯದರ್ಶಿಗಳಾದ ಕೊಲ್ಯದ ಗಿರೀಶ್, ಎಸ್.ಐ.ಮುನೀರ್ ಅಹಮ್ಮದ್, ನಗರಸಭಾ ನಾಮ ನಿರ್ದೇಶಿತ ಸದಸ್ಯ ಸದಾ ಮುದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net