ಮೋಡ ಬಿತ್ತನೆ ಬಗ್ಗೆ ಸಿದ್ದರಾಮಯ್ಯನವರಿಗೆ ತಪ್ಪು ಮಾಹಿತಿ; ಪ್ರಕಾಶ ಕೋಳಿವಾಡ

31-RNR-03 PRAKASHA KOLIWADA
Published on

ರಾಣೆಬೆನ್ನೂರ: ಮೋಡ ಬಿತ್ತನೆಯಿಂದ ಮಳೆ ಆಗಿರುವ ಉದಾಹರಣೆಗಳಿವೆ. ಸಿಎಂ ಸಿದ್ದರಾಮಯ್ಯನವರಿಗೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಶಾಸಕ ಪ್ರಕಾಶ ಕೋಳಿವಾಡ, ಸಿಎಂ ಸಿದ್ದರಾಮಯ್ಯ ಅವರ ಮೋಡ ಬಿತ್ತನೆಯಿಂದ ಮಳೆಯಾದ ಉದಾಹರಣೆಗಳಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋಡ ಬಿತ್ತನೆಯಿಂದ ಮಳೆ ಆಗಿರುವ ಬಗ್ಗೆ ವಿಜ್ಞಾನಿಗಳು ಸಂಶೋಧನೆ ನಡೆಸಿ ವರದಿ ಕೂಡ ಸಲ್ಲಿಸಿದ್ದಾರೆ. ಅದಕ್ಕಾಗಿ 30 ವರ್ಷಗಳ ಕಾಲ ಸಂಶೋಧನೆ ನಡೆಸಿ 300 ಕೋಟಿ ರೂ. ಖುರ್ಚ ಸಹ ಮಾಡಲಾಗಿದೆ. ಆದರೆ, ಸಿಎಂ ಸಿದ್ದರಾಮಯ್ಯನವರು ಅಧಿಕಾರಿಗಳು ನೀಡಿರುವ ತಪ್ಪು ಮಾಹಿತಿಯಿಂದ ಆ ರೀತಿ ಹೇಳಿಕೆ ನೀಡಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net