ಸ್ವಾಮೀಜಿ ಆಶೀರ್ವಾದ ಪಡೆದ ಪ್ರಲ್ಹಾದ ಜೋಶಿ

New Mahamane New
Published on

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಗುರುವಾರದಂದು ಧಾರವಾಡದ ಮನಗುಂಡಿ ಮಹಾಮನೆ ಮಠ ಮತ್ತು ದೇವರ ಹುಬ್ಬಳ್ಳಿ ಸಿದ್ದಾಶ್ರಮ ಮಠಕ್ಕೆ ಭೇಟಿ ನೀಡಿ, ಸ್ವಾಮೀಜಿ ಆಶೀರ್ವಾದ ಪಡೆದರು.

ಮಹಾಮನೆ ಮಠದಲ್ಲಿ ಶ್ರೀ ಬಸವಾನಂದ ಸ್ವಾಮೀಜಿ ಹಾಗೂ ದೇವರ ಹುಬ್ಬಳ್ಳಿಯ ಸಿದ್ದಾಶ್ರಮ ಮಠದಲ್ಲಿ ಶ್ರೀ ಸಿದ್ಧಯೋಗಿ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಧಾರವಾಡ ಲೋಕಸಭಾ ಚುನಾವಣೆಗೆ ಸತತ 5ನೇ ಬಾರಿ ಬಿಜೆಪಿಯಿಂದ ಸ್ಪರ್ಧಿಸಿರುವ ಪ್ರಲ್ಹಾದ ಜೋಶಿ ಅವರು, ಗುರುವಾರ ಬೆಳಗಿನಿಂದಲೇ ಚುನಾವಣಾ ಪ್ರಚಾರ ಚುರುಕುಗೊಳಿಸಿದರು.

ದೇವರ ಹುಬ್ಬಳ್ಳಿ ಪ್ರಚಾರ ಸಭೆಯಲ್ಲಿ ಮಾತನಾಡಿ, ಪ್ರಧಾನಿ ಮೋದಿ ಅವರು ಕಳೆದ ಹತ್ತು ವರ್ಷಗಳಿಂದ ದೇಶದ ಪ್ರಗತಿಯನ್ನೇ ಗುರಿಯಾಗಿಟ್ಟುಕೊಂಡು ಶ್ರಮಿಸಿದ್ದಾರೆ ಎಂದು ಹೇಳಿದರು.

ಹಲವು ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುತ್ತಿರುವ ಮೋದಿ ಅವರ ಕೈ ಬಲಪಡಿಸಲು ಎಲ್ಲರೂ ಒಂದಾಗಿ ಬಿಜೆಪಿಗೆ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಆರತಿ ಹಿರೇಮಠ, ಕಲ್ಮೇಶ ಬೇಲೂರು, ರುದ್ರಗೌಡ ಪಾಟೀಲ, ಮಾಲತೇಶ ತೌಲಿ, ಬಸವರಾಜ ಮನಗುಂದ, ಮಲ್ಲನಗೌಡ ಪಾಟೀಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net