

ಬೆಳಗಾವಿ : ಮುಜರಾಯಿ ಇಲಾಖೆ ವ್ಯಾಪ್ತಿ ದೇವಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಮೊಬೈಲ್ ಬ್ಯಾನ್ ಮಾಡಿರುವ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ. ಅಪರೂಪಕ್ಕೆ ಇಂದು ಯೋಗ್ಯವಾದ ನಿರ್ಣಯವನ್ನು ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ 36ಸಾವಿರ ದೇವಸ್ತಾನಗಳಿದ್ದು ಖಾಸಗಿ ದೇವಸ್ಥಾನಗಳೂ ಇವೆ.ಅವರಿಗೂ ನಾನು ವಿನಂತಿ ಮಾಡ್ತೇನಿ ಅಲ್ಲೂ ಮೊಬೈಲ್ ಬ್ಯಾನ್ ಮಾಡಬೇಕು.ಈ ಬಗ್ಗೆ ನಮ್ಮ ಕಾರ್ಯಕರ್ತರ ಮನವಿ ಮಾಡಲಿದ್ದಾರೆ.ಕಾಂಗ್ರೆಸ್ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಕ್ರಮ ಎಂದು ಮುತಾಲಿಕ್ ಹೇಳಿದರು.