ದ.ಕ. ಜಿಲ್ಲಾ ವ್ಯಾಪ್ತಿಗೆ ಪ್ರಮೋದ್ ಮುತಾಲಿಕ್ ಪ್ರವೇಶ ನಿರ್ಬಂಧ

Pramod Mutalik 22
Published on

ಮಂಗಳೂರು: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ದ.ಕ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಿಗೆ ಪ್ರವೇಶ ನಿರ್ಬಂಧಿಸಿ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊಡಿಸಿದ್ದಾರೆ.

ಮುತಾಲಿಕ್ ಅವರು ಈ ಹಿಂದೆ ಭೇಟಿ ಮಾಡಿದ ಸ್ಥಳಗಳಲ್ಲಿ ಉದ್ರೇಕಕರಾಗಿ ಭಾಷಣ ಮಾಡಿ ಕೋಮು ಭಾವನೆ ಕೆರಳಿಸುತ್ತಾ ಬಂದಿದ್ದಾರೆ. ದ.ಕ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಗೆ ಪ್ರವೇಶಿಸಿದ್ದಲ್ಲಿ ಪ್ರಚೋದನಕಾರಿ ಹೇಳಿಕೆಯನ್ನು ನೀಡಿ ಮತ್ತಷ್ಟು ಪ್ರಕ್ಷುಬ್ಧ ವಾತಾವರಣ ಉಂಟಾಗಿ ಸಂಘರ್ಷ ನಡೆದು ಕೋಮು ಸೌಹಾರ್ದತೆಗೆ ದಕ್ಕೆಯಾಗುವ ಸಾಧ್ಯತೆಯಿದೆ.

ಆದ್ದರಿಂದ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರ ಅನ್ವಯ ನಿರ್ಬಂಧ ಆದೇಶ ಹೊರಡಿಸುವಂತೆ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರ ಹೃಷಿಕೇಶ್ ಭಗವಾನ್ ಸೋನಾವಣೆ ಅವರು ಜಿಲ್ಲಾಧಿಕಾರಿಯವರಿಗೆ ಕೋರಿದ್ದು, ಅದರಂತೆ ಜಿಲ್ಲೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜುಲೈ 28ರಿಂದ ಮುಂದಿನ ಆದೇಶದವರೆಗೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net