

ಗೋಣಿಕೊಪ್ಪ: ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕುಲ್ಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷೆಯಾಗಿ ಮಂಜುಳಾ ಆಯ್ಕೆಯಾಗಿದ್ದಾರೆ.
ಒಟ್ಟು 21 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯಿತಿಗೆ ಸೋಮವಾರ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಯಲ್ಲಿ ಪ್ರಮೋದ್ ಗಣಪತಿ 11 ಮತ, ರಾಜೇಶ್ 10 ಮತ ಪಡೆದರು. ಮಂಜುಳಾ 11 ಮತ ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಗೀತಾ 9 ಮತ ಪಡೆದರು. ಒಂದು ಮತ ತಿರಸ್ಕಾರಗೊಂಡಿದೆ.
ಅಧ್ಯಕ್ಷ ಪ್ರಮೋದ್ ಗಣಪತಿ ಹಾಗೂ ಉಪಾಧ್ಯಕ್ಷೆ ಮಂಜುಳಾ ಅವರಿಗೆ ಪಕ್ಷದ ಕಾರ್ಯಕರ್ತರು ಅಭಿನಂದಿಸಿ, ಗೋಣಿಕೊಪ್ಪಲು ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.