ಸಾಲೂರು ಬೃಹನ್ಮಠಕ್ಕೆ ಪ್ರಣವ್ ಮೊಹಂತಿ ಭೇಟಿ

14 HANUR 2
Published on

ಹನೂರು: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠಕ್ಕೆ ಶನಿವಾರ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರಣವ್ ಮೊಹಂತಿ ಕುಟುಂಬ ಸಮೇತ ಆಗಮಿಸಿ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.


ಈ ವೇಳೆ ಮಠದ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ಹಿರಿಯ ಶ್ರೀ ಗುರುಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಉಪಾಹಾರ ಸೇವಿಸಿದರು. ಇದಕ್ಕೂ ಮುನ್ನ ಮಲೆಮಹದೇಶ್ವರನ ದರ್ಶನ ಪಡೆದರು. ಶ್ರೀ ಕ್ಷೇತ್ರದಲ್ಲಿ ಭಕ್ತರಿಗೆ ಕಲ್ಪಿಸಿರುವ ಸೌಕರ್ಯ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.


ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ನೌಕರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net