

ಸೋಮವಾರಪೇಟೆ: ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಮಹಿಳಾ ಘಟಕದ ವತಿಯಿಂದ ಶಾಂತಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಿಂಕಥಾನ್ ಕ್ಯಾನ್ಸರ್ ಅರಿವು ಜಾಗೃತಿ ಶಿಬಿರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
ಶಿಬಿರವನ್ನು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಾರುಮತಿ ಸಿ.ಆಚಾರ್ಯ ಉದ್ಘಾಟಿಸಿ ಮಾತನಾಡಿ, ಮೊದಲ ಹಂತದಲ್ಲೇ ಕ್ಯಾನ್ಸರ್ ಕಾಯಿಲೆಯನ್ನು ಕಂಡು ಹಿಡಿದರೆ ಚಿಕಿತ್ಸೆ ಮೂಲಕ ಗುಣಪಡಿಸಬಹುದು ಎಂದು ಸಂಶೋಧನೆಯಿಂದ ತಿಳಿದು ಬಂದಿದೆ. ರೋಗಲಕ್ಷಣಗಳನ್ನು ಕಂಡು ಬಂದರೆ ಕೂಡಲೆ ವೈದ್ಯರನ್ನು ಸಂಪರ್ಕಿಸಬೇಕು ಎಂದು ಹೇಳಿದರು.
ಜೇಸಿಐ ಸೋಮವಾಪೇಟೆ ಪುಷ್ಪಗಿರಿ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಸುದೀಪ್ ಮಾತನಾಡಿ, ಜೇಸಿಐ ಸಂಸ್ಥೆ ಪಿಂಕಥಾನ್ ಎಂಬ ಹೆಸರಿನಲ್ಲಿ ಕ್ಯಾನ್ಸರ್ ಜಾಗೃತಿ ಶಿಬಿರವನ್ನು ಫೆಬ್ರವರಿ ತಿಂಗಳಲ್ಲಿ ಭಾರತಾದ್ಯಂತ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಪ್ರತಿಯೊಬ್ಬರಿಗೂ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವುದು. ಮನುಕುಲಕ್ಕೆ ಮಾರಕವಾಗಿರುವ ಕ್ಯಾನ್ಸರ್ ಬರದಂತೆ ತಡೆಗಟ್ಟಲು ನಾವೆಲ್ಲಾ ಕೈಜೋಡಿಸಿ ಜಾಗೃತಿ ಮೂಡಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಜೇಸಿಐ ಅಧ್ಯಕ್ಷ ಎಸ್.ಆರ್.ವಸಂತ್, ಶಾಂತಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ, ಸದಸ್ಯೆ ಆಶಾ. ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕಿರಣ್ ಕುಮಾರ್, ಕಾರ್ಯದರ್ಶಿ ಜಗದಾಂಭ ಗುರುಪ್ರಸಾದ್, ವಲಯ ಕಾರ್ಯದರ್ಶಿ ಮಾಯಾ ಗಿರೀಶ್, ನಿಕಟ ಪೂರ್ವ ವಲಯ ಅಧಿಕಾರಿ ವಿದ್ಯಾ ಸೋಮೇಶ್, ಖಜಾಂಚಿ ಪುಷ್ಪಕ್ ಇತರರು ಇದ್ದರು. ಜೇಸಿ ಪದಾಧಿಕಾರಿಗಳಾದ ಮನೋಹರ್, ಪಿ.ಎ.ಲೋಕೇಶ್ ಇದ್ದರು.