

ಗುಂಡ್ಲುಪೇಟೆ: ದಾಸೋಹ ದಿನಾಚರಣೆ ಅಂಗವಾಗಿ ಮಂಗಳವಾರ ಪಟ್ಟಣದಲ್ಲಿ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಹಾಸಭಾದ ಯುವಘಟಕ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶಿವಕುಮಾರ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಾವಿರಾರು ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ವೀರಶೈವ ಯುವಕರ ಸಂಘದ ವತಿಯಿಂದ ಪಟ್ಟಣದ ಜೆಎಸ್‌ಎಸ್ ಕಾಲೇಜಿನ ಎದುರು ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಹಾಗೂ ಪ್ರಸಾದ ವಿನಿಯೋಗ ಆಯೋಜಿಸಲಾಗಿತ್ತು. ಸಾವಿರಾರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.