

ರಾಯಚೂರು: ಮಾನ್ವಿ ತಾಲೂಕು ಮದ್ಲಾಪುರ ಗ್ರಾಮದ ಪ್ರಸಾದ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು. ಎ್ಐಆರ್‌ನಲ್ಲಿರುವ ಎಲ್ಲ ಆರೋಪಿಗಳನ್ನು ಬಂಸಬೇಕು ಎಂದು ಒತ್ತಾಯಿಸಿ ಮಾದಿಗ ದಂಡೋರದಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಸಂಚಾರ ನಡೆಸಲಾಯಿತು.
ಅಂಬೇಡ್ಕರ್ ವೃತ್ತದಿಂದ ನಗರದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಮೃತ ಪ್ರಸಾದ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ದಲಿತರು, ಬಡವರ ಪರ ಹೋರಾಟ ನಡೆಸುತ್ತಿದ್ದ ಪ್ರಸಾದನ ಬೆಳವಣಿಗೆ ಸಹಿಸದೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಯ ಹಿಂದೆ ರಾಜಕೀಯ ಕೈವಾಡವಿದ್ದು, ಬಂತ ಆರೋಪಿಗಳು ಈಗಾಗಲೇ ಜಾಮೀನು ಪಡೆದು ಹೊರಬಂದು ಪ್ರಸಾದ ಕುಟುಂಬಕ್ಕೆ ಬೆದರಿಕೆ ಒಡ್ಡುತ್ತಿದ್ದಾರೆ.
ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಿ ಕೊಲೆಯ ಹಿಂದಿರುವ ಪ್ರಭಾವಿಗಳನ್ನು ಬಂಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಲವಾಗಿರುವ ಜಿಲ್ಲಾಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಕಾರಿಗಳನ್ನು ಅಮಾನತ್ತುಗೊಳಿಸಬೇಕು. ಸೂಕ್ತ ಕ್ರಮಕೈಗೊಳ್ಳದ ಪೊಲೀಸರ ವಿರುದ್ಧ ಕ್ರಮಕೈಗೊಳ್ಳಬೇಕು.
ಕೊಲೆ ಹಿಂದೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಕುಮ್ಮಕ್ಕಿದ್ದು, ಗ್ರಾಮದಲ್ಲಿ ಭಯದ ವಾತಾವರಣವಿದೆ. ಮೃತ ಪ್ರಸಾದ ಕುಟುಂಬಕ್ಕೆ ಕಿರುಕುಳ ನೀಡಲಾಗುತ್ತಿದ್ದು ಸೂಕ್ತ ರಕ್ಷಣೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯಾಧ್ಯಕ್ಷ ನರಸಪ್ಪ ದಂಡೋರ, ಜಿಲ್ಲಾಧ್ಯಕ್ಷ ಮಾನಪ್ಪ ಮೇಸ್ಟ್ರಿ, ಪದಾಕಾರಿಗಳಾದ ಗಣೇಶ ದುಪ್ಪಲಿ, ರ್ನಾಂಡಿಸ್, ಸುರೇಶ ದುಗನೂರು, ರಾಘವೇಂದ್ರ ಬೋರೆಡ್ಡಿ, ತ್ರಿಲೋಕಚಂದ, ರಂಜೀತ್ ದಂಡೋರ, ದುಳ್ಳಯ್ಯ ಗುಂಜಳ್ಳಿ ಪಾಲ್ಗೊಂಡಿದ್ದರು.