ಸಿಎಂ ಭೇಟಿ ಮಾಡಿದ ಪ್ರಸಾದ್ ಅಳಿಯ!

dacdc770-d449-4e51-913a-bde0eb92ff71
Published on

ಮೈಸೂರು: ಸಂಸದ ವಿ.ಶ್ರೀನಿವಾಸಪ್ರಸಾದ್ ಅಳಿಯ ಡಾ.ಮೋಹನ್ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ.ಮೋಹನ್ ಜತೆ ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಕೂಡ ಇದ್ದರು. ಈ ಇಬ್ಬರು ನಾಯಕರು ಶಾಸಕ ಅನಿಲ್ ಚಿಕ್ಕಮಾದು ಜತೆ ತೆರಳಿ ಸಿಎಂ ಜತೆ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net