ಪ್ರಶಸ್ತಿ ಪುರಸ್ಕೃತ ಶಿಕ್ಷಕರು ಜಿಲ್ಲೆಯ ಹೆಮ್ಮೆ

CTD Sanman 08nnnnnn
Published on

ಚಿತ್ರದುರ್ಗ: ರಾಷ್ಟ್ರ,ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರ ಸಾಧನೆ ಜಿಲ್ಲೆಯ ಜನರಿಗೆ ಹೆಮ್ಮೆ ವಿಷಯ ಎಂದು ರೋಟರಿ ಕ್ಲಬ್ ಉಪಾಧ್ಯಕ್ಷ ಬಿ.ಎಸ್.ಕನಕರಾಜ್ ಹೇಳಿದರು.

ಎಸ್‌ಆರ್‌ಬಿಎಂಎಸ್ ರೋಟರಿ ಬಾಲಭವನದಲ್ಲಿ ಬುಧವಾರ ರೋಟರಿ ಕ್ಲಬ್ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಡಾ.ಮಹೇಶ್ ಮಾತನಾಡಿ, ಶಿಕ್ಷಕರು ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬಿತ್ತುವ ಮೂಲಕ ಸಂಸ್ಕಾರಯುತ ಸಮಾಜ ನಿರ್ಮಿಸಬೇಕು ಎಂದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಕವಿತಾ, ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ನಿರ್ದೇಶಕ ಎಸ್.ವೀರೇಶ್, ಅಧ್ಯಕ್ಷೆ ಗಾಯತ್ರಿ ಶಿವರಾಂ, ಕ್ಲಬ್ ಕಾರ್ಯದರ್ಶಿ ಜಯಶ್ರೀ ಷಾ, ಲಕ್ಷ್ಮಣ್, ಡಾ.ತಿಪ್ಪೇಸ್ವಾಮಿ, ಸತ್ಯನಾರಾಯಣ್, ಎಚ್‌ಕೆಎಸ್ ಸ್ವಾಮಿ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮೃತ್ಯುಂಜಯ ಸ್ವಾಮಿ, ನಂಜುಂಡೇಶ್ವರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net