ಜೋಳ ಖರೀದಿಸಲು ಸಿಎಂಗೆ ಪ್ರತಾಪಗೌಡ ಪತ್ರ

pratap gowda patil
Published on

ಮಸ್ಕಿ: ಮುಂಗಾರು-ಹಿಂಗಾರು ಹಂಗಾಮಿನಲ್ಲಿ ಬೆಳೆದ ಜೋಳವನ್ನು ರೈತರಿಂದ ತ್ವರಿತವಾಗಿ ಖರೀದಿ ಮಾಡಬೇಕೆಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸೋಮವಾರ ಪತ್ರ ಬರೆದು ಒತ್ತಾಯಿಸಿದ್ದಾರೆ.

ಈಗಾಗಲೇ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರದಲ್ಲಿ ನೋಂದಾಯಿಸಿದ ಜೋಳ ಖರೀದಿ ಮಾಡದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ಮತ್ತೆ ಮುಂಗಾರು ಹಂಗಾಮ ಆರಂಭವಾಗಿದ್ದು, ರೈತರು ಬಿತ್ತನೆಗೆ ಕೃಷಿ ಚಟುವಟಿಕೆಯಲ್ಲಿ ತೊಡಗಬೇಕಾಗಿದೆ.

ಇಂಥ ಸಮಯದಲ್ಲಿ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಅವರು ರೈತರ ಹಿತದೃಷ್ಟಿಯಿಂದ ಬಾಕಿ ಜೋಳವನ್ನು ಕೂಡಲೇ ಖರೀದಿ ಮಾಡಬೇಕೆಂದು ಮನವಿ ಮಾಡಿದ್ದಾರೆ. ಸರ್ಕಾರದ ಗಮನ ಸೆಳೆಯುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೂ ಪತ್ರ ಬರೆದಿದ್ದಾರೆ.

3-ಎಂಎಸ್‌ಕೆ-1

ಪ್ರತಾಪಗೌಡ ಪಾಟೀಲ್

========

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net