

ಮಡಿಕೇರಿ:
ಮಡಿಕೇರಿ ಕೊಡವ ಸಮಾಜದ ಅಭಿವೃದ್ಧಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಮಡಿಕೇರಿ ಕೊಡವ ಸಮಾಜದ ನಿಯೋಗ ಸಂಸದರ ಮೈಸೂರಿನ ಕಚೇರಿಯಲ್ಲಿ ಗುರುವಾರ ಭೇಟಿ ಮಾಡಿತು. ಮಡಿಕೇರಿ ಕೊಡವ ಸಮಾಜ ಕಟ್ಟಡದ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿಕೊಡುವ ಮೂಲಕ ಸಮಾಜದ ಅಭಿವೃದ್ಧಿ ಕಾರ್ಯಕ್ಕೆ ಕೈಜೋಡಿಸಬೇಕೆಂದು ಈ ಸಂದರ್ಭ ಮನವಿ ಮಾಡಲಾಯಿತು.
ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ನೇತೃತ್ವದ ನಿಯೋಗದಲ್ಲಿ ನಿರ್ದೇಶಕರಾದ ಕೇಕಡ ವಿಜು ದೇವಯ್ಯ, ನಂದಿನೆರವಂಡ ರವಿ ಬಸಪ್ಪ, ಮಂಡಿರ ಸದಾಮುದ್ದಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ, ಶಾಂತೆಯಂಡ ವಿಶಾಲ್ ಕಾರ್ಯಪ್ಪ ಹಾಗು ಚೊಟ್ಟೆಯಂಡ ಸಂಜು ಕಾವೇರಪ್ಪ ಇದ್ದರು.