ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪುವ ವಿಚಾರ ಗೊತ್ತಿಲ್ಲ: ಜಿ.ಟಿ.ದೇವೇಗೌಡ

GTD
Published on

ಮೈಸೂರು: ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪುವ ವಿಚಾರ ನನಗೆ ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.


ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನೂರಕ್ಕೆ ನೂರರಷ್ಟು ಪ್ರತಾಪ್ ಸಿಂಹಗೆ ಟಿಕೆಟ್ ಸಿಗುತ್ತದೆ. ನಾನು 2 ಚುನಾವಣೆಯಲ್ಲಿ ಪ್ರತಾಪ್ ಸಿಂಹರನ್ನು ಬೆಂಬಲಿಸಿದ್ದೆ. ಈಗಲೂ ಬೆಂಬಲಿಸುತ್ತೇನೆ. 10 ವರ್ಷದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ. ಅವರಿಗೆ ಟಿಕೆಟ್ ಸಿಗುವ ವಿಶ್ವಾಸ ಇದೆ ಎಂದು ತಿಳಿಸಿದರು.


ತುಳಸಿದಾಸಪ್ಪ ನಂತರ ಮೈಸೂರಿನಿಂದ ಒಕ್ಕಲಿಗರು ಸಂಸದರಾಗಿದ್ದಾರೆ. ಪ್ರತಾಪ್ ಸಿಂಹಗೆ ಟಿಕೆಟ್ ಸಿಗುತ್ತೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ. ಅಂತ ಯಾವ ಸಂದರ್ಭವೂ ಬಂದಿಲ್ಲ. ಹೀಗಾಗಿ, ಈ ಪ್ರಶ್ನೆ ಉದ್ಬವ ಆಗುವುದಿಲ್ಲ. ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net