ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Police
Published on

ಕಲಬುರಗಿ: ನಿವೃತ್ತ ಪೊಲೀಸ್ ಅಧಿಕಾರಿಗಳ ಜಿಲ್ಲಾ ಕ್ಷೇಮಾಭಿವೃದ್ಧಿ ಸಂಘದಿಂದ ನಿವೃತ್ತ ಡಿಜಿಪಿ ಡಾ.ಡಿ.ವಿ. ಗುರುಪ್ರಸಾದ್ ಅವರ ಕೃತಿ ಕೈಗೆ ಬಂದ ತುತ್ತು ಲೋಕಾರ್ಪಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಶುಕ್ರವಾರ ನಡೆಯಿತು.
ಕೃತಿ ಲೋಕಾರ್ಪಣೆ ಮಾಡಿದ ಕರ್ನಾಟಕ ಆಡಳಿತ ನ್ಯಾಯಮಂಡಳಿ ಸದಸ್ಯರೂ ಆದ ನಿವೃತ್ತ ಡಿಜಿಪಿ ರಾಘವೇಂದ್ರ ಔರಾದಕರ್ ಮಾತನಾಡಿ, ನಿವೃತ್ತ ಪೊಲೀಸ್ ಅಧಿಕಾರಿಗಳು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಿವೃತ್ತ ಅಧಿಕಾರಿಗಳ ಮಕ್ಕಳನ್ನು ಗುರುತಿಸಿ ಪುರಸ್ಕರಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದರು.
ಸಮಾಜಮುಖಿ ಕಾರ್ಯಗಳ ಜತೆಗೆ ಆರೋಗ್ಯದ ಕಡೆಯೂ ಗಮನಹರಿಸಬೇಕು. ಸದೃಢ ಆರೋಗ್ಯದಿಂದ ಸಮಾಜ, ದೇಶದ ನಿರ್ಮಾಣ ಸಾಧ್ಯ ಎಂದ ಅವರು, ಪುರಸ್ಕಾರಕ್ಕೆ ಒಳಗಾದ ಎಲ್ಲ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಅಭಿನಂದಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಬಸವರಾಜ ಇಂಗಿನ್ ಮಾತನಾಡಿ, ಸಂಘದಿಂದ ಪ್ರತಿವರ್ಷ ಒಂದಿಲ್ಲೊAದು ವಿನೂತನ ಕಾರ್ಯಕ್ರಮ ಆಯೋಜಿಸುವುದರ ಜತೆಗೆ ಅಧಿಕಾರಿಗಳ ಮಕ್ಕಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ತಿಳಿಸಿದರು.
ನಿವೃತ್ತ ಡಿಜಿಪಿ ಡಾ.ಡಿ.ವಿ. ಗುರುಪ್ರಸಾದ್, ಕಲಬುರಗಿ ವಲಯ ಡಿಐಜಿಪಿ ಅನುಪಮ್ ಅಗರವಾಲ್, ನಗರ ಪೊಲೀಸ್ ಆಯುಕ್ತ ಚೇತನ್ ಆರ್., ನಿವೃತ್ತ ಡಿಐಜಿಪಿ ಡಾ.ರಾಜಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪ್ಪಾರಾವ್ ಅಕ್ಕೋಣಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net