ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ

New Project (9)
Published on

ಕಡಬ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಆಶ್ರಯದಲ್ಲಿ ಬೆಳ್ತಂಗಡಿ ಹೋಲಿ ರೆಡೀಮರ್ ಶಾಲೆಯಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪುತ್ತೂರು ತಾಲೂಕನ್ನು ಪ್ರತಿನಿಧಿಸಿದ ಶ್ರೀರಾಮಕುಂಜೇಶ್ವರ ಕನ್ನಡ ವಾಧ್ಯಮ ಪ್ರೌಢಶಾಲೆ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಕನ್ನಡ ಭಾಷಣದಲ್ಲಿ ಸಿಂಚನಾ ಪ್ರಥಮ, ಸಂಸ್ಕೃತ ಭಾಷಣದಲ್ಲಿ ಪ್ರಣಮ್ಯ ಎಚ್.ಕೆ. ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮುಖ್ಯಶಿಕ್ಷಕ ಸತೀಶ್ ಭಟ್ ಹಾಗೂ ಸಾಂಸ್ಕೃತಿಕ ತಂಡದ ಶಾಲಾ ಹಿರಿಯ ಶಿಕ್ಷಕಿ ಪುಷ್ಪವತಿ ವಾರ್ಗದರ್ಶನದಲ್ಲಿ ಶಿಕ್ಷಕರು ತರಬೇತಿ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net