

ಬಂಟ್ವಾಳ: ಬಿ.ಸಿ.ರೋಡ್‌ನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಿ.ಸಿ.ರೋಡ್‌ನ ಅಜ್ಜಿಬೆಟ್ಟುವಿನಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬಿ.ಮೂಡದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.
ಮೂವರು ಪ್ರಥಮ, ಒಬ್ಬರು ದ್ವಿತೀಯ, ಮೂವರು ತೃತೀಯ ಬಹುಮಾನ ಪಡೆದಿದ್ದಾರೆ. ವಿಹಾನ್ ಛದ್ಮವೇಷದಲ್ಲಿ ಪ್ರಥಮ, ಯಜ್ಞಶ್ರೀ ಇಂಗ್ಲಿಷ್ ಕಂಠಪಾಠದಲ್ಲಿ ಪ್ರಥಮ, ಸಮರ್ಥ ಅಭಿನಯಗೀತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ನಮಸ್ಯಾ ಚಿತ್ರಕಲೆಯಲ್ಲಿ ದ್ವಿತೀಯ, ಶಿವರಾಜ್ ಆಶುಭಾಷಣದಲ್ಲಿ ತೃತೀಯ, ಕೃತೇಶ್ ಚಿತ್ರಕಲೆಯಲ್ಲಿ ತೃತೀಯ, ಬಿನೀತ್ ಕವನ ವಾಚನದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.