ರಾಮಕುಂಜೇಶ್ವರ ಆಂಗ್ಲ ಮ್ಯಾಧ್ಯಮಕ್ಕೆ ಸಮಗ್ರ ಪ್ರಶಸ್ತಿ

New Project (34)
Published on

ಕಡಬ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ರಾಮಕುಂಜ ಕ್ಲಸ್ಟರ್ ಸಂಯುಕ್ತ ಆಶ್ರಯದೊಂದಿಗೆ ಆಯಿಶಾ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ನಡೆದ ರಾಮಕುಂಜ ಕ್ಲಸ್ಟರ್ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮ್ಯಾಧ್ಯಮ ಪ್ರಾಥಮಿಕ ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಲಭಿಸಿದೆ.

ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ., ವಾರ್ಗದರ್ಶನದಲ್ಲಿ ವ್ಯವಸ್ಥಾಪಕ ರಮೇಶ್ ರೈ ಆರ್.ಬಿ., ಪ್ರೌಢಶಾಲಾ ಮುಖ್ಯಗುರು ಗಾಯತ್ರಿ ಯು.ಎನ್., ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಗುರು ಲೋಹಿತಾ ಎ. ಹಾಗೂ ಶಿಕ್ಷಕರು ತರಬೇತಿ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net