ಕಲ್ಲಾಪು ಪಟ್ಲ ಶಾಲೆಯಲ್ಲಿ ಪ್ರತಿಭಾ ಕಾರಂಜಿ

karanji
Published on

ಉಳ್ಳಾಲ: ಕಲ್ಲಾಪು ಪಟ್ಲ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಗುರುವಾರ ನಡೆಯಿತು. ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಿದರು. ಅಪರಾಧ ಮತ್ತು ಸಂಚಾರಿ ವಿಭಾಗದ ಡಿಸಿಪಿ ದಿನೇಶ್ ಕುಮಾರ್, ಪ್ರತಿಭಾ ಕಾರಂಜಿ ಸ್ವಾಗತ ಸಮಿತಿ ಗೌರವಾಧ್ಯಕ್ಷ ಬಾಝಿಲ್ ಡಿಸೋಜ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ತಹಸೀನಾ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ಕೆಎಂಕೆ ಮಂಜನಾಡಿ, ತಖ್ವಾ ಜುಮಾ ಮಸೀದಿ ಅಧ್ಯಕ್ಷ ಮೊಹಮ್ಮದ ಮೊದಲಾದವರು ಉಪಸ್ಥಿತರಿದ್ದರು.

ಸಮೂಹ ಸಂಪನ್ಮೂಲ ವ್ಯಕ್ತಿ ಗೀತಾ ಜುಡಿತ್ ಸಲ್ದಾನ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣ ಪ್ರಭಾರ ಸಮನ್ವಯಾಧಿಕಾರಿ ಸುಷ್ಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲೆ ಮುಖ್ಯಶಿಕ್ಷಕಿ ಸುಜಾತಾ ಟಿ.ಎಸ್. ವಂದಿಸಿದರು. ಶಿಕ್ಷಕಿ ವಿನಿತ ಕುಮಾರಿ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net