ಹಿಂದು ಸಮಾಜಕ್ಕೆ ನ್ಯಾಯ ಒದಗಿಸಲಿ - ಮುಖಂಡ ಅರುಣ್‌ಕುಮಾರ್ ಪುತ್ತಿಲ ಒತ್ತಾಯ

PTR_23 APR_6
Published on

ಪುತ್ತೂರು: ಭಯೋತ್ಪಾದನಾ ಕೃತ್ಯದ ಹಿಂದೆ ಕೆಲಸ ಮಾಡುವ ವ್ಯಕ್ತಿಗಳ ಮೇಲೆಯೂ ಸೂಕ್ತ ಕ್ರಮ ಕೈಗೊಂಡು ಹಿಂದು ಸಮಾಜಕ್ಕೆ ನ್ಯಾಯ ನೀಡಬೇಕು. ಕಾಶ್ಮೀರದಲ್ಲಿ ನಡೆದ ಘಟನೆ ೨೦೪೭ರ ವೇಳೆ ಮುಸ್ಲಿಂ ರಾಷ್ಟ್ರವಾಗಿ ಪರಿವರ್ತಿಸುವ ಯೋಚನೆಯಲ್ಲಿ ಮಾಡಿದ ಮೊದಲ ಕೃತ್ಯ ಎಂದು ಹಿಂದು ಮುಖಂಡ ಅರುಣ್‌ಕುಮಾರ್ ಪುತ್ತಿಲ ಹೇಳಿದರು.

ಉಗ್ರರ ದಾಳಿ ಖಂಡಿಸಿ ಪುತ್ತೂರಿನಲ್ಲಿ ಮಾತೃಭೂಮಿ ಸಂರಕ್ಷಣಾ ವೇದಿಕೆ, ವಿಶ್ವಹಿಂದು ಪರಿಷತ್ ಬಜರಂಗದಳ, ಪುತ್ತಿಲಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಮಾತನಾಡಿ, ದೇಶ ಎಂದಾಗ ನಾವೆಲ್ಲ ಒಂದು ಎಂದು ಉತ್ತರ ನೀಡುವ ಕಾರ್ಯ ಪ್ರತಿಭಟನೆಯಲ್ಲಿಯಾಗಿದೆ. ಜಿಹಾದಿ ಮನಸ್ಥಿತಿ ಬಗ್ಗೆ ಒಗ್ಗಟ್ಟಿನಿಂದ ಪ್ರತಿಭಟಿಸುವ ಅನಿವಾರ್ಯತೆಯಿದೆ ಎಂದರು.

ದರ್ಬೆಯಿಂದ ಪಾದಯಾತ್ರೆ ಮೂಲಕ ಪುತ್ತೂರು ಗಾಂಽಕಟ್ಟೆಯ ತನಕ ತೆರಳಿ ಪ್ರತಿಭಟನಾ ಸಭೆ ನಡೆಸಲಾಯಿತು. ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದವರಿಗೆ ಒಂದು ನಿಮಿಷ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ವಿಶ್ವ ಹಿಂದು ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು.ಪೂವಪ್ಪ, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ನಗರ ಅಧ್ಯಕ್ಷ ಶಿವಕುಮಾರ್, ಪ್ರಮುಖರಾದ ಮುರಳೀಕೃಷ್ಣ ಹಸಂತಡ್ಕ, ಪ್ರಸನ್ನಕುಮಾರ್ ಮಾರ್ತ, ಡಾ.ಸುರೇಶ್ ಪುತ್ತೂರಾಯ, ಫಿಸಿಯೋಥೆರಪಿಸ್ಟ್ ಕೃಷ್ಣ ಪ್ರಸನ್ನ, ಆರ್.ಸಿ.ನಾರಾಯಣ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net