ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳ ಪ್ರತಿಭೆಗೆ ಸ್ಪೂರ್ತಿ -ಶಾಸಕ ಡಿ.ವೇದವ್ಯಾಸ ಕಾಮತ್

mng-1dec-pratiba
Published on




ಮಂಗಳೂರು : ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.
ನಗರದ ಬಂಟ್ಸ್ ಹಾಸ್ಟೆಲ್ನ ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ‘ ಪ್ರತಿ ವಿದ್ಯಾರ್ಥಿಗೆ ಪ್ರತಿಭಾ ಕಾರಂಜಿಯ ಅವಶ್ಯಕತೆ ಇದೆ. ಇದು ಮಕ್ಕಳಲ್ಲಿರುವ ಕಲೆಗಳನ್ನು ಪ್ರದರ್ಶಿಸಲು ಒಳ್ಳೆಯ ವೇದಿಕೆಯಾಗಿದೆ. ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸುವುದು ನಮ್ಮ ಹೊಣೆ ಎಂದರು.
ಮಂಗಳೂರು ಮಹಾ ನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ
ದಯಾನಂದ ಆರ್. ನಾಯಕ್, ರಾಮಕೃಷ್ಣ ವಿದ್ಯಾಸಂಸ್ಥೆಯ ಸಂಚಾಲಕ ಡಾ. ಬಿ. ಸಂಜೀವ ರೈ, ಶಾಲಾ ಮುಖ್ಯೋಪಾಧ್ಯಾಯಿನಿ ವೀಣಾ ಕೆ. ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net