ಶ್ರೀಯೋಗಿ ನಾರೇಯಣ ಬಣಜಿಗ (ಬಲಿಜ) ಸಂಘದಿಂದ ಪ್ರತಿಭಾ ಪುರಸ್ಕಾರ

Published on

ಮೈಸೂರು: ಶ್ರೀಯೋಗಿ ನಾರೇಯಣ ಬಣಜಿಗ (ಬಲಿಜ) ಸಂಘದಿಂದ ಅ.12 ರಂದು ಸಮುದಾಯದ ವಧು-ವರರ ಸಮಾವೇಶ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸರಸ್ವತಿಪುರಂ (ಕುಕ್ಕರಹಳ್ಳಿಕೆರೆ ಬಳಿ) ರಾಧಾಕೃಷ್ಣ ಮಾರ್ಗದಲ್ಲಿರುವ ಸಂಘದ ಆವರಣದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಗೋಪಾಲಕೃಷ್ಣ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬೆಳಗ್ಗೆ 10.30ಕ್ಕೆ ಮಾಜಿ ಸಚಿವ ಡಾ.ಎಂ.ಆರ್.ಸೀತಾರಾಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ಸಂಘದ ಅಧ್ಯಕ್ಷ ಎಂ.ನಾರಾಯಣ, ಗೌರವಾಧ್ಯಕ್ಷ ಎಚ್.ಎ.ವೆಂಕಟೇಶ್, ಸರ್ವ ಬಣಜಿಗ (ಜಲಿಜ) ಸಂಘದ ಅಧ್ಯಕ್ಷ ಕೆ.ಎನ್.ಮೋಹನ್‌ಕುಮಾರ್, ದಾಸ ಬಣಜಿಗ ಸಂಘ ಅಧ್ಯಕ್ಷ ಸಿ.ಜಿ.ಚಂದ್ರಶೇಖರ್ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು, ಸ್ಮರಣಿಕೆ, ಪ್ರಮಾಣಪತ್ರ ನೀಡಿ ಗೌರವಿಸಲಾಗುವುದು. ಇದೇ ವೇಳೆ ರಾಜ್ಯದ ವಿವಿಧ ಭಾಗಗಳಿಂದ ಸಮುದಾಯ ವಧು, ವರರ ಆಗಮಿಸಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಎಂ.ನಾರಾಯಣ, ಮುಖಂಡರಾದ ಕೆ.ಚಂದ್ರಶೇಖರ್, ಬಿ.ಕೆ.ಸುರೇಶ್, ಎಚ್.ವಿ.ನಾಗರಾಜ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net