3ರಂದು ವೀರಶೈವ ಸಂಘದಿಂದ ಪ್ರತಿಭಾ ಪುರಸ್ಕಾರ

Published on

ಹೊಳೆನರಸೀಪುರ: ತಾಲೂಕು ವೀರಶೈವ- ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಗಸ್ಟ್ 3ರಂದು ಬೆಳಗ್ಗೆ 10 ಗಂಟೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪಟ್ಟಣದ ಬಸವ ಭವನದಲ್ಲಿ 2025ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕಪಡೆದ ವೀರಶೈವ ಲಿಂಗಾಯತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ಎಂ.ಸಿ. ಕುಮಾರಸ್ವಾಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನುಗ್ಗೇಹಳ್ಳಿ ಹಿರೇಮಠದ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ತೇಜೂರು ಸಿದ್ದರಾಮೇಶ್ವರ ಮಠದ ಕಲ್ಯಾಣ ಸ್ವಾಮೀಜಿ, ಟಿ. ಮಾಯಗೌಡನಹಳ್ಳಿ ಮಠದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀವರ್ಚನ ನೀಡಲಿದ್ದಾರೆ. ಮೈಸೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಟಿ.ಪಿ.ರೇಣುಕಮೂರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಂ.ಸಿ. ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಹಾಸನ ಎ.ವಿ.ಕೆ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಚ.ಯತೀಶ್ವರ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ವಿವರಿಸಿದ್ದಾರೆ. ತಾಲೂಕಿನ ವೀರಶೈವ- ಲಿಂಗಾಯತ ಜನಾಂಗದ ಪ್ರಮುಖರೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net