

ರಾಯಚೂರು ಛಲವಾರಿ ಮಹಾಸಭಾ ಮಹಿಳಾ ಘಟಕದಿಂದ ಆ.24 ರಂದು ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಸ್ನಾತಕೋತ್ತರದಲ್ಲಿ ಹೆಚ್ಚಿನ ಅಂಕಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆಂದು ಮಹಾಸಭಾ ಜಿಲ್ಲಾಧ್ಯಕ್ಷೆ ಅರ್ಚನಾ ಸುಂಕಾರಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಸಾನಿಧ್ಯವನ್ನು ಮೈಸೂರಿನ ಶ್ರೀ ಉರಿಲಿಂಗ ಪೆದ್ದಿ ಮಹಾಸಂಸ್ಥಾನದ ಶ್ರೀಜ್ಞಾನ ಪ್ರಕಾಶ ಮಹಾಸ್ವಾಮೀಜಿ, ಬೀದರ್ ಬುದ್ಧ ವಿಹಾರದ ಧಮ್ಮದೀಪ ಭಂತೇಜಿ ವಹಿಸಲಿದ್ದಾರೆ. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಉದ್ಘಾಟಿಸಲಿದ್ದಾರೆ. ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಘನ ಉಪಸ್ಥಿತಿ ವಹಿಸಲಿದ್ದಾರೆ.
ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷ ಸಿದ್ದಯ್ಯ, ಮಹಿಳಾ ಮಹಾಸಭಾದ ಅಧ್ಯಕ್ಷೆ ಈರಮ್ಮ, ಲಲಿತಾ ಆರೋಲಿಕರ್ ಆಗಮಿಸಲಿದ್ದಾರೆ. ಕೋಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ, ಮುಖ್ಯ ಅತಿಥಿಗಳಾಗಿ ಸಂಸದ ಜಿ.ಕುಮಾರ ನಾಯಕ, ಶಾಸಕರಾದ ದದ್ದಲ್ ಬಸನಗೌಡ,ಡಾ.ಶಿವರಾಜ ಪಾಟೀಲ್, ಎ.ವಸಂತಕುಮಾರ, ಕರೆಮ್ಮ ನಾಯಕ ಸೇರಿ ಅನೇಕರು ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸುಮಾರು 200 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ನಾಗರತ್ನ, ಪ್ರಿಯದರ್ಶಿನಿ, ನಂದಿನಿ, ಸುಜಾತ, ಸಾವಿತ್ರಿ ಇದ್ದರು.