ಉಪ್ಪಾರ ನೌಕರರ ಮತ್ತು ವೃತ್ತಿಪರರ ಸಂಘದಿಂದ 17 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Student writing essay computation
Published on

ಮೈಸೂರು: ಮೈಸೂರು ಜಿಲ್ಲಾ ಉಪ್ಪಾರ ನೌಕರರ ಮತ್ತು ವೃತ್ತಿಪರರ ಸಂಘದಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮುದಾಯದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಡಿ.17ರಂದು ಬೆಳಗ್ಗೆ 10 ಗಂಟೆಗೆ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಲಿಂಗಣ್ಣ ತಿಳಿಸಿದರು.

310 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುತ್ತದೆ. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುವುದು. ಅಂದು ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಭಾಗದ ಜಿಲ್ಲೆಗಳಿಂದ ಸಮುದಾಯದ ಜನರು ಭಾಗವಹಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಾಸಕ ಪುಟ್ಟರಂಗಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಚಿತ್ರದುರ್ಗದ ಭಗೀರಥ ಪೀಠದ ಶ್ರೀ ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ, ಮಂಡ್ಯ ಜಿಲ್ಲೆಯ ಸರಗೂರು ಮಠದ ಶ್ರೀ ಮಹದೇವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಗಿರೀಶ್ ಅವರು ಭಗೀರಥ ಮಹರ್ಷಿ

ಅವರ ಭಾವಚಿತ್ರ ಅನಾವರಣ ಮಾಡಲಿದ್ದು, ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಕಲೆ, ಕೃಷಿ, ಸಮಾಜ ಸೇವೆ, ಯೋಗ, ಕ್ರೀಡೆಯಲ್ಲಿ ಸಾಧನೆ ಮಾಡಿದ ಅನೇಕರಿಗೆ ಭಗೀರಥ ಸೇವಾ ಪ್ರಶಸ್ತಿ ಪ್ರದಾನ ಮಾಡುವುದಾಗಿ ತಿಳಿಸಿದರು. ಸಂಘದ ಅಧ್ಯಕ್ಷ ಟಿ.ಆರ್.ಶಿವರಾಜು, ಖಜಾಂಚಿ ಗೋವಿಂದರಾಜು, ಗೌ.ಅಧ್ಯಕ್ಷ ಜವರಶೆಟ್ಟಿ, ಗೌ.ಸಲಹೆಗಾರ ಮಹದೇವ ಶೆಟ್ಟಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net