ವಿಜಯವಾಣಿ ಸುದ್ದಿಜಾಲ ಕಲಬುರಗಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ವತಿಯಿಂದ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆ ಜನವರಿ ೧೬ರಂದು ಬೆಳಗ್ಗೆ ೧೦ಕ್ಕೆ ಕಲಬುರಗಿ ಎಸ್.ಬಿ.ಟೆಂಪಲ್ ರಸ್ತೆಯ ಸೇಂಟ್ ಮೇರಿ ಶಾಲೆಯಲ್ಲಿ ಆಯೋಜಿಸಲಾಗಿದೆ.
ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಾಲಿಕೆಯ ಮಹಾಪೌರರು, ವಿವಿಧ ನಿಗಮ, ಮಂಡಳಿ ಅಧ್ಯಕ್ಷರು, ಸೇಂಟ್ ಮೇರಿ ಚರ್ಚ್ನ ಮುಖ್ಯಸ್ಥರು, ಅಧಿಕಾರಿಗಳು, ನೌಕರರ ಸಂಘದ ಅಧ್ಯಕ್ಷರು, ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಸೇರಿ ಅನೇಕ ಗಣ್ಯರು ಭಾಗವಹಿಸುವರು.