ಗೋಣಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

pratibha karanji
Published on

ಗೊಣಿಕೊಪ್ಪ:

ದೇಶದ ಭವಿಷ್ಯ ರೂಪಿಸಲು ಮಕ್ಕಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಗಳನ್ನು ಹೊರತರಲು ಪ್ರಯತ್ನಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರವಿ ಹೇಳಿದರು. ಅರುವತ್ತೊಕ್ಲು ಸರ್ವದೈವತಾ ವಿದ್ಯಾಸಂಸ್ಥೆಯಲ್ಲಿ ಗೋಣಿಕೊಪ್ಪ ಸಮೂಹ ಸಂಪನ್ಮೂಲ ಕೇಂದ್ರ, ಸರ್ವದೈವತಾ ವಿದ್ಯಾ ಸಂಸ್ಥೆ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮಾನ್ವಯಾಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ ನಡೆದ ಗೋಣಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿವಿಧ ಪ್ರಕಾರಗಳ ಕಲೆಗಳಲ್ಲಿ ಆಸಕ್ತಿ ತಾಳುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಾಧ್ಯವಿದೆ.

ವಿವಿಧ ಕ್ಷೇತ್ರಗಳಲ್ಲಿ ವಿಭಿನ್ನವಾಗಿ ಪ್ರಯತ್ನಿಸುವ ಮೂಲಕ ಜೀವಿತ ಅವಧಿಯಲ್ಲಿ ಗುರುತಿಸಿಕೊಳ್ಳುವ ಕಾರ್ಯ ನಡೆಯಬೇಕಾಗಿದೆ. ಸೃಜನಶೀಲ ಗುಣಗಳನ್ನ ಗುರುತಿಸಿ ಅದಕ್ಕೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವ ಕಾರ್ಯ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳಿಂದ ನಡೆಯುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ವದೈವತಾ ವಿದ್ಯಾಸಂಸ್ಥೆ ಅಧ್ಯಕ್ಷ ಕಾಡ್ಯಮಾಡ ಪ್ರಕಾಶ್ ಮೊಣ್ಣಪ್ಪ ಮಾತನಾಡಿ, ಮಾಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದಾಗ ಜಯ ಸಿಗುತ್ತದೆ. ದೇಶದ ರಕ್ಷಣೆಗಾಗಿ ದೇಶದ ಬೆಳವಣಿಗೆಗಾಗಿ ಜೀವನವನ್ನು ಮುಖ್ಯ ಭಾಗ್ಯವಾಗಿಸಿಕೊಳ್ಳಬೇಕು. ಈ ಉದ್ದೇಶದೊಂದಿಗೆ ಬದುಕನ್ನು ಸಾಕ್ಷಾತ್ಕಾರ ಮಾಡಿಕೊಳ್ಳಬೇಕು. ನುಡಿದಂತೆ ನಡೆಯುವುದು ನಡೆದಂತೆ ನುಡಿಯುವುದರಿಂದ ವಿಶ್ವ ಮಾನವನಾಗಿ ಬದುಕುಲು ಸಾಧ್ಯವಾಗಬಲ್ಲದು ಎಂದರು.

ಅರುವತೊಕ್ಲು ಗ್ರಾಪಂ ಅಧ್ಯಕ್ಷೆ ಬಿ.ಬಿ. ಶರೀಫಾ, ಸದಸ್ಯರುಗಳಾದ ಜಮ್ಮಡ ಸೌಮ್ಯ, ಮಹೇಶ್, ಕ್ಷೇತ್ರ ಸಮಾನ್ವಯಾಧಿಕಾರಿ ಬಿಂದು, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರುಗಳ ಸಂಘದ ಅಧ್ಯಕ್ಷ ಹೆಚ್.ಕೆ. ಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ, ಗೋಣಿಕೊಪ್ಪ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ರಾಧಾ, ಪೊನ್ನಂಪೇಟೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಜೀವನ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಮಹೇಶ್, ರಾಜ್ಯ ಸಹಾಯಕ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣ ಚೈತನ್ಯ, ಹಾತೂರು ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಮಾಲಿನಿ, ಸರ್ವ ದೈವತಾ ಕಾಲೇಜಿನ ಪ್ರಾಂಶುಪಾಲ ಪ್ರದೀಪ್, ಮುಖ್ಯ ಶಿಕ್ಷಕಿ ಮನೆಯಪಂಡ ಶೀಲಾ ಬೋಪಣ್ಣ ಮತ್ತು ವಿಶಾಲಾಕ್ಷಿ, ಭರತ್, ನಿವೃತ್ತ ಶಿಕ್ಷಕ ಸೋಮಯ್ಯ, ಕುಶಾಲಪ್ಪ, ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net