13, 14ರಂದು ಜಾಲ್ಸೂರಿನಲ್ಲಿ ಪ್ರತಿಭಾ ಕಾರಂಜಿ

Published on

ಸುಳ್ಯ: ದಕ್ಷಿಣ ಕನ್ನಡ ಜಿಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕಚೇರಿ ಮತ್ತು ಜಾಲ್ಸೂರು ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಗಳ ಸಹಭಾಗಿತ್ವದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರತಿಭಾಕಾರಂಜಿ ಜಾಲ್ಸೂರು ಗ್ರಾಮದ ವಿನೋಬನಗರ ವಿದ್ಯಾಸಂಸ್ಥೆಯಲ್ಲಿ ನ.13 ಮತ್ತು 14ರಂದು ನಡೆಯಲಿದೆ.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಜಾಲ್ಸೂರು ಗ್ರಾಪಂ ಉಪಾಧ್ಯಕ್ಷೆ ತಿರುಮಲೇಶ್ವರಿ ಅರ್ಭಡ್ಕ, ಗ್ರಾಪಂ ಸದಸ್ಯರಾದ ಲೀಲಾವತಿ ವಿನೋಬನಗರ, ಅಬ್ದುಲ್ ಮಜೀದ್ ನಡುವಡ್ಕ, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಗೌಡ ಬೊಮ್ಮೆಟ್ಟಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ತಹಸೀಲ್ದಾರ್ ಮಂಜುಳ ಎಂ., ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಉದ್ಯಮಿ ಕೆ.ಸುಧಾಕರ ಕಾಮತ್ ವಿನೋಬನಗರ ಉಪಸ್ಥಿತರಿರುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net