

ವಿಜಯಪುರ: ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಕ್ತ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಂತಹ ಕಾರ್ಯಕ್ರಮಗಳು ಸಹಾಯಕವಾಗಿವೆ ಮುಖಂಡ ಸೋಮನಗೌಡ ಪಾಟೀಲ (ಅಪ್ಪುಗೌಡ) ಹೇಳಿದರು.
ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ವಿವೇಕಾನಂದ ಶಾಲೆಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡ ಪ್ರಸಕ್ತ ಸಾಲಿನ ಮನಗೂಳಿ ಕ್ಲಸ್ಟರ್ 2ರ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪ್ರತಿಭೆ ಅನಾವರಣವಾಗಲು ಇದೊಂದು ಅದ್ಭುತ ಕಾರ್ಯಕ್ರಮ ಎಂದರು.
ಶಿಕ್ಷಣ ಸಂಯೋಜಕ ಶರಣು ಮಣ್ಣೂರ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಸೂಕ್ತ ಪ್ರತಿಭೆ ಗುರುತಿಸಲು ಶಿಕ್ಷಕರು ಶ್ರಮಿಸಬೇಕು ಎಂದರು. ಸಂಪನ್ಮೂಲ ವ್ಯಕ್ತಿ ಭಾರತಿ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮನಗೂಳಿಯ ನರೇಶಾನಂದ ಸ್ವಾಮೀಜಿ ಹಾಗೂ ಮೋಕ್ಷ ಪ್ರಾಣ ಮಾತಾಜಿ ಸಾನ್ನಿಧ್ಯ ವಹಿಸಿದ್ದರು. ರಮೇಶ ಬೆಳ್ಳುಬ್ಬಿ ಸ್ವಾಗತಿಸಿದರು. ಶರಣು ಬಸ್ತಾಳ ನಿರೂಪಿಸಿದರು. ಡಿ.ಎಲ್. ರಜಪೂತ ವಂದಿಸಿದರು.