ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಪ್ರತಿಭಾ ಕಾರಂಜಿ ಸಹಕಾರಿ

D.15-MDG-2P1
Published on

ಮೂಡಿಗೆರೆ: ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಸಹಕಾರಿಯಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಿಸಬೇಕು ಎಂದು ನಿವೃತ್ತ ಶಿಕ್ಷಕ ಕಳಸೆಗೌಡ ಹೇಳಿದರು.

ತಳವಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಫಲ್ಗುಣಿ ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸಹಕಾರಿ. ಶಿಕ್ಷಣದ ಭಾಗವಾಗಿ ನಡೆಯುವ ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪ್ರೇರಕವಾಗಿದೆ ಎಂದು ತಿಳಿಸಿದರು.

ಹಿರಿಯ ಕೃಷಿಕ ಡಿ.ಎ.ಅಣ್ಣೇಗೌಡ ಮಾತನಾಡಿ, ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ, ಅತಿ ಹೆಚ್ಚು ಪ್ರತಿಭೆಗಳು ಅರಳುವುದು ಸರ್ಕಾರಿ ಶಾಲೆಗಳಿಂದ ಎಂಬುದನ್ನು ಮರೆಯಬಾರದು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದರಿಂದ ವಿದ್ಯಾರ್ಥಿಗಳ ಜತೆಗೆ ಗ್ರಾಮಸ್ಥರಿಗೂ ಮನೋರಂಜನೆ ಸಿಗುತ್ತದೆ ತಮ್ಮ ಮಕ್ಕಳ ಪ್ರತಿಭೆಯನ್ನು ವೇದಿಕೆಯಲ್ಲಿ ನೋಡಿ ಆನಂದ ಪಡುವ ಪಾಲಕರ ಸರ್ಕಾರಿ ಶಾಲೆ ಬಗ್ಗೆ ಹೆಚ್ಚಿನ ಒಲವು ಹೊಂಎಬೇಕು ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಅಣ್ಣಪ್ಪ, ಸಿಆರ್‌ಪಿ ಮೋಹನ್, ಶಿಕ್ಷಕಿ ಶೋಭಾ, ನಾಗೇಶ್ ಭಟ್, ಟಿ.ಡಿ.ರುದ್ರಪ್ಪಗೌಡ, ಬೊಮ್ಮಯ್ಯ, ಸುರೇಶ್, ಶಿಕ್ಷಕರಾದ ಮಂಜಪ್ಪ, ಶ್ಯೆಲಾರಾದ್ಯ, ಗುರುಮೂರ್ತಿ, ಕೀರ್ತಿ, ಸೋಮಶೇಖರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net