

ಮುಂಡರಗಿ: ಶಿಕ್ಷಣ ಕ್ಷೇತ್ರದಲ್ಲಿ ಕಲೆಗಳನ್ನು ಉತ್ತೇಜಿಸುವ ಮೂಲಕ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಸಹಕಾರಿಯಾಗುತ್ತದೆ ಎಂದು ಬಿಇಒ ಗಂಗಾಧರ ಅಣ್ಣಿಗೇರಿ ಹೇಳಿದರು.
ಪಟ್ಟಣದ ರೋಟರಿ ಶಿಕ್ಷಣ ಸಂಸ್ಥೆಯ ವಿ.ಜಿ. ಲಿಂಬಿಕಾಯಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೊಟ್ರೇಶ ಅಂಗಡಿ ಮಾತನಾಡಿ, ಪಾಲಕರು ಮತ್ತು ಶಿಕ್ಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸುವ ಕೆಲಸ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಸಿಆರ್ಪಿ ಎಸ್.ಡಿ. ಬಸೇಗೌಡ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಮಾರ್ ಬಿ., ಎಚ್.ಎನ್. ಗೌಡರ, ಚಿದಾನಂದ ವಡ್ಡರ, ಸಿ.ವಿ. ಪಾಟೀಲ, ಎಂ.ಬಿ. ನಾಗರಹಳ್ಳಿ, ಮಹಾಂತೇಶ ಕೊನೇರಿ, ಮನೋಹರ ಎಸ್. ಇದ್ದರು.