

ಗಂಗೊಳ್ಳಿ: ಪ್ರತಿಯೊಂದು ಮಕ್ಕಳಲ್ಲಿ ಒಂದಲ್ಲ ಒಂದು ಪ್ರತಿಭೆ ಇದ್ದೇ ಇದೆ. ಪ್ರತಿಭೆ ಹೊರಹೊಮ್ಮಿಸಲು ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ ಮೂಲಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಿದೆ ಎಂದು ಗಂಗೊಳ್ಳಿಯ ಸ್ಟೆಲ್ಲಾ ಮಾರೀಸ್ ಶಿಕ್ಷಣ ಸಂಸ್ಥೆ ಜಂಟಿ ಕಾರ್ಯದರ್ಶಿ ಡಯಾನಾ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಆಶ್ರಯದಲ್ಲಿ ಗಂಗೊಳ್ಳಿಯ ಸ್ಟೆಲ್ಲಾ ಮಾರೀಸ್ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯಲ್ಲಿ ಗುರುವಾರ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 24-25ನ್ನು ಉದ್ಘಾಟಿಸಿ ಮಾತನಾಡಿದರು.
ಬಿಆರ್‌ಪಿ ಮಿಲ್ಟನ್ ಕ್ರಾಸ್ತಾ, ಸಿಆರ್‌ಪಿ ಪ್ರದೀಪಕುಮಾರ್ ಶೆಟ್ಟಿ, ಗಂಗೊಳ್ಳಿ ಗ್ರಾಪಂ ಮಾಜಿ ಸದಸ್ಯರಾದ ಬಿ.ರಾಘವೇಂದ್ರ ಪೈ, ಜಯಂತಿ ಖಾರ್ವಿ, ಸಾಮಾಜಿಕ ಕಾರ್ಯಕರ್ತೆ ತಿಲೋತ್ತಮ ನಾಯಕ್ ಶುಭಾಶಂಸನೆಗೈದರು. ಮುಖ್ಯ ಶಿಕ್ಷಕಿ ಡೊರೇನ್ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಕ್ರೆಸೆನ್ಸ್ ಸ್ವಾಗತಿಸಿದರು. ಬಿಆರ್‌ಪಿ ಸಂತೋಷ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನೂಜಾಡಿ ಶಾಲೆ ಮುಖ್ಯ ಶಿಕ್ಷಕ ರಾಜೇಶ ಪಡುಕೋಣೆ ನಿರೂಪಿಸಿದರು. ಸಹಶಿಕ್ಷಕಿ ಶಾಂತಿ ವಂದಿಸಿದರು.