

ದೇವದುರ್ಗ: ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ವಿನೂತನ ಕಾರ್ಯಕ್ರಮವಾಗಿದ್ದು, ಕಲಿಕಾ ಅಂತರ ಸರಿದೂಗಿಸಲು ಸೂಕ್ತ ವೇದಿಕೆಯಾಗಿದೆ ಎಂದು ತಾಪಂ ಇಒ ರಾಮರೆಡ್ಡಿ ಪಾಟೀಲ್ ಹೇಳಿದರು.
ಪಟ್ಟಣದ ಡಾನ್ ಬೊಸ್ಕೋ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಕ್ರವಾರ ಮಾತನಾಡಿದರು. ಪ್ರತಿಭೆಗಳು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ ಎಂದರು.
ಮಕ್ಕಳಲ್ಲಿ ಅಡಗಿರುವ ಶಕ್ತಿಯನ್ನು ಗುರುತಿಸುವ ವಿಶೇಷ ಶಕ್ತಿ ಶಿಕ್ಷಕರಿಗಿದೆ. ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಲು ಅನುಕೂಲವಾಗುತ್ತದೆ ಎಂದರು.
ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಕಕರು ವಿದ್ಯಾರ್ಥಿಗಳನ್ನು ಜಿಲ್ಲಾ, ರಾಜ್ಯ ಮಟ್ಟದಲ್ಲಿ ಗುರುತಿಸುವ ರೀತಿಯಲ್ಲಿ ತರಬೇತಿ ನೀಡಬೇಕು. ಸರ್ಕಾರಿ ಶಾಲಾ ಮಕ್ಕಳು ಎಲ್ಲರಂಗದಲ್ಲಿ ಮುಂದೆ ಬರಬೇಕು ಎಂದರು.
ಸಮನ್ವಯ ಅಧಿಕಾರಿ ಶಿವರಾಜ ಪೂಜಾರಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹನುಮಂತ್ರಾಯ ಶಾಖೆ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಎಚ್.ಶಿವರಾಜ, ನೇಮಣ್ಣ, ರಂಗಯ್ಯ