

ಗೋಣಿಕೊಪ್ಪ: ಪೊನ್ನಂಪೇಟೆಯ ಸಂತ ಅಂತೋಣಿ ಪ್ರಾಥಮಿಕ ಶಾಲೆಯಲ್ಲಿ ಪೊನ್ನಂಪೇಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
ಸಂತ ಅಂತೋಣಿ ಪ್ರೌಢಶಾಲೆಯ ಆಡಳಿತಾಧಿಕಾರಿ ಡೇವಿಡ್ ಸಗರಾಯ್ ರಾಜ್ ಮಾತನಾಡಿ, ಮಕ್ಕಳಿಗೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು.
ತೀರ್ಪುಗಾರರಾಗಿ ಮಾಯಮುಡಿ, ಕುಟ್ಟ, ಗೋಣಿಕೊಪ್ಪ, ಬಾಳಲೆ, ತಿತಿಮತಿ, ವಿರಾಜಪೇಟೆ ಕ್ಲಸ್ಟರ್‌ನ ಶಿಕ್ಷಕರು ಕಾರ್ಯ ನಿರ್ವಹಿಸಿದರು. ಸರ್ಕಾರಿ ಅನುದಾನರಹಿತ ಶಾಲೆಗಳ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯ ಮಕ್ಕಳಿಗೆ ಪ್ರತ್ಯೇಕ ವಿಭಾಗದಲ್ಲಿ ಕ್ಲೇ ಮಾಡಲಿಂಗ್, ಛದ್ಮವೇಶ, ಭಾವಗೀತೆ, ಜನಪದ ನೃತ್ಯ, ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪ್ರಥಮ ಸ್ಥಾನ ಪಡೆದ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆಯಾದರು.
ಸಿಸ್ಟರ್ ಫ್ರೋಸ್ಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಸಂತ ಅಂತೋಣಿ ಪ್ರೌಢ ಶಾಲೆಯ ಫಾ. ಡೇವಿಡ್ ಸಗರಾಯಿ ರಾಜ್, ರಾಜ್ಯ ಸರ್ಕಾರಿ ಎಸ್‌ಸಿ-ಎಸ್‌ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಟಿ.ಎಸ್.ಮಹೇಶ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿರಾಜಪೇಟೆ ಘಟಕದ ನಿರ್ದೇಶಕ ಎಸ್.ನಿಂಗರಾಜು, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಡಿ.ಚಂದನಾ, ಶಿಕ್ಷಣ ಸಂಯೋಜಕಿ ಕೆ.ಆರ್.ವಿಶಾಲಾಕ್ಷಮ್ಮ, ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಾಡ ಜೀವನ್, ಶಿಕ್ಷಕರಾದ ಕೆ.ಬಿ ಪುಷ್ಪಾ, ಶ್ರೀಕೃಷ್ಣ ಇತರರಿದ್ದರು.