ಪ್ರತಿಭಾ ಕಾರಂಜಿ ಮಕ್ಕಳಿಗೆ ಉತ್ತಮ ವೇದಿಕೆ

ಚೆರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸ ಕಾರ್ಯಕ್ರಮದಲ್ಲಿ ಮಕ್ಕಳ ವೇಷಭೂಷಣ ಗಮನ ಸೆಳೆಯಿತು.
ಚೆರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸ ಕಾರ್ಯಕ್ರಮದಲ್ಲಿ ಮಕ್ಕಳ ವೇಷಭೂಷಣ ಗಮನ ಸೆಳೆಯಿತು.
Published on

ನಾಪೋಕ್ಲು: ಚೆರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬುಧವಾರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಿಲನಾ ಮುತ್ತಣ್ಣ ಅವರ ಅಧ್ಯಕ್ಷತೆಯಲ್ಲಿ ಕ್ಲಸ್ಟರ್ ವ್ಯಾಪ್ತಿಯ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವೀಣಾ ರೈ ಮಾತನಾಡಿ, ಪ್ರತಿಭಾ ಕಾರಂಜಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗಾಗಿ ಶಿಕ್ಷಣ ಇಲಾಖೆ ರೂಪಿಸಿದ ಒಂದು ವಿನೂತನ ಕಾರ್ಯಕ್ರಮ. ಶಿಕ್ಷಣ ಕ್ಷೇತ್ರದಲ್ಲಿ ಕಲೆಯನ್ನು ಉತ್ತೇಜಿಸುವ ಮೂಲಕ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಯನ್ನು ಹೊರತರಲು ಇದೊಂದು ಉತ್ತಮ ವೇದಿಕೆ ಎಂದು ಅಭಿಪ್ರಾಯಪಟ್ಟರು.

ಕ್ಲಸ್ಟರ್ ವ್ಯಾಪ್ತಿಯ 200 ಮಕ್ಕಳು 47 ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, 47 ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆಯಾದರು. ಕಾರ್ಯಕ್ರಮವನ್ನು ಪಿ.ಎಸ್.ಸುಬ್ಬಯ್ಯ ಉದ್ಘಾಟಿಸಿದರು. ಪಾಕ ದೇವಸ್ಥಾನದ ಅಧ್ಯಕ್ಷ ಎಂ.ಎನ್.ಮಾದಪ್ಪ, ವಾಹನ ಮಾಲೀಕರ ಸಂಘದ ಅಧ್ಯಕ್ಷ ರವಿ, ಮಸೀದಿ ಅಧ್ಯಕ್ಷ ಹಸೈನಾರ್, ನಿವೃತ್ತ ಹಿರಿಯ ಶಿಕ್ಷಕಿ ಬಡ್ಡಿರ ನಳಿನಿ, ಕಾಲೇಜು ಪ್ರಾಂಶುಪಾಲ ಡಿ.ಪಿ.ರಾಮಕೃಷ್ಣ, ಪ್ರೌಢಶಾಲೆ ಮುಖ್ಯ ಶಿಕ್ಷಕ ಲೋಕೇಶ್, ಶಿಕ್ಷಕ ಪರಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net