ಪ್ರತಿಭೆ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ

oppo_2
ಮದ್ದೂರು ತಾಲೂಕಿನ ಹಾಗಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆ.ಹೊನ್ನಲಗೆರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಮ್ಮಿಕೊಳ್ಳಲಾಗಿತ್ತು. ವಿ.ಜಿ.ಸ್ವಾಮಿ, ಭವ್ಯಾ, ಕುಮಾರ್, ರಾಧಾ, ಮರಿಸ್ವಾಮಿ, ಚಂದ್ರಶೇಖರ್ ಇದ್ದರು.
Published on

ಮದ್ದೂರು: ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿ ಆಗಾಧ ಪ್ರತಿಭೆ ಇದ್ದು, ಅದರ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ ಎಂದು ಮುಖ್ಯಶಿಕ್ಷಕ ವಿ.ಜಿ.ಸ್ವಾಮಿ ಅಭಿಪ್ರಾಯಿಸಿದರು.


ತಾಲೂಕಿನ ಹಾಗಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಕೆ. ಹೊನ್ನಲಗೆರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದರು.


ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ರೀತಿಯ ವಿಶೇಷ ಪ್ರತಿಭೆ ಇದೆ. ಮಕ್ಕಳು ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರ ತರುವ ಮೂಲಕ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ತಮ್ಮ ವಿಜೇತರಾಗಬೇಕೆಂದು ಕಿವಿಮಾತು ಹೇಳಿದರು.
ಪ್ರತಿಭಾ ಕಾರಂಜಿ ಕಾರಂಜಿಯಲ್ಲಿ ಸುಮಾರು 15 ಶಾಲೆಗಳ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಜನಪದ, ಭಾವಗೀತೆ, ರಾಷ್ಟ್ರಗೀತೆಯನ್ನು ಹಾಡಿದರು. ಮಣ್ಣಿನಲ್ಲಿ ವಿವಿಧ ರೀತಿಯ ಕಲಾ ಕೃತಿಗಳನ್ನು ಮಾಡುವ ಮೂಲಕ ಶಿಕ್ಷಕರು ಹಾಗೂ ಪಾಲಕರ ಮನಸ್ಸನ್ನು ಗೆದ್ದರು.

ಎಸ್‌ಡಿಎಂಸಿ ಅಧ್ಯಕ್ಷೆ ರಾಧಾ ಸಿದ್ದರಾಜು, ಶಿಕ್ಷಕರಾದ ಮರಿಸ್ವಾಮಿ, ಚಂದ್ರಶೇಖರ್, ಭವ್ಯಾ, ಕುಮಾರ್, ಸ್ವಾಮಿ, ಸಿಆರ್‌ಪಿ ಬೀರೇಶ್ ಗ್ರಾಮದ ಯುವಕರು ಹಾಗೂ ಮುಖಂಡರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net