

ನಾಪೋಕ್ಲು: ಸಂಪಾಜೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯೂ ಸ.ಹಿ.ಪ್ರಾ.ಶಾಲೆ ಊರುಬೈಲು ಚೆಂಬುವಿನಲ್ಲಿ ಇತ್ತೀಚೆಗೆ ನಡೆಯಿತು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಚೆಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ತೀರ್ಥರಾಮ ಪೂಜಾರಿಗದ್ದೆ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳ್ಳಲು ಪ್ರತಿಭಾ ಕಾರಂಜಿ ವೇದಿಕೆ ಸಹಕಾರಿಯಾಗಿದೆ ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ಎಂ.ಪಿ.ಮಹೇಶ ಉದ್ಘಾಟಿಸಿದರು. ಗ್ರಾ.ಪಂ.ಸದಸ್ಯ ರಮೇಶ ಹುಲ್ಲು ಬೆಂಕಿ, ಚೆಂಬು ಗ್ರಾ.ಪಂ. ಸದಸ್ಯೆ ಕುಸುಮಾ, ಮಡಿಕೇರಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ ಪೆರಾಜೆ, ಎನ್.ಟಿ. ವಸಂತ , ಸಿಆರ್‌ಪಿ ಚಂದ್ರಶೇಖರ, ಮುಖ್ಯಶಿಕ್ಷಕ ಸೋಮಣ್ಣ ಇದ್ದರು.