ಲಿಂಗಾಯತರನ್ನು ಒಬಿಸಿಗೆ ಸೇರಿಸುವುದೇ ಗುರಿ

IMG-20240901-WA0035
ಕೊಳ್ಳೇಗಾಲ ಪಟ್ಟಣದ ಜೆಎಸ್‌ಎಸ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
Published on

ಕೊಳ್ಳೇಗಾಲ: ಲಿಂಗಾಯತ ಸಮಾಜವನ್ನು ಒಬಿಸಿಗೆ ಸೇರಿಸುವ ನಿಟ್ಟಿನಲ್ಲಿ ರಾಷ್ಟ್ರ ಮಟ್ಟದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಅಧ್ಯಕ್ಷ ಶಂಕರ ಬಿದರಿ ಹೇಳಿದರು.

ಪಟ್ಟಣದ ಜೆಎಸ್‌ಎಸ್ ಕಾಲೇಜು ಸಭಾಂಗಣದಲ್ಲಿ ವೀರಶೈವ ಲಿಂಗಾಯತ ನೌಕರರ ಬಸವ ಸೇವಾ ಸಮಿತಿ, ಶ್ರೀ ಬಸವ ಸೇವಾ ಪತ್ತಿನ ಸಹಕಾರ ಸಂಘ ಹಾಗೂ ಬಸವ ಮಹಾಮನೆ ಟ್ರಸ್ಟ್ ವತಿಯಿಂದ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಲಿಂಗಾಯತ ಸಮುದಾಯದ ಜನಾಂಗವನ್ನು ಒಬಿಸಿ ವರ್ಗಕ್ಕೆ ಸೇರಿಸುವುದೇ ಮಹಾಸಭೆ ಹೋರಾಟದ ಮುಖ್ಯ ಗುರಿಯಾಗಿದೆ. ಈಗಾಗಲೇ ಕೆಲವು ಪಂಗಡಗಳನ್ನು ಒಬಿಸಿಗೆ ಸೇರಿಸಲಾಗಿದೆ. ಹೀಗಾಗಿ ರಾಷ್ಟ್ರ ಮಟ್ಟದಲ್ಲಿ ಹೋರಾಟ ನಡೆಸಿ ಈ ಜನಾಂಗಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವುದೇ ನನ್ನ ಆದ್ಯತೆ ಎಂದು ತಿಳಿಸಿದರು.

ಸುತ್ತೂರು ಕ್ಷೇತ್ರ ಜೆಎಸ್‌ಎಸ್ ಸಂಸ್ಥೆಗಳ ಸಂಯೋಜನಾಧಿಕಾರಿ ವಿ.ಎಲ್.ತ್ರಿಪುರಾಂತಕ ಮಾತನಾಡಿ, ವೀರಶೈವ ಸಮುದಾಯದ ಮಕ್ಕಳು ಉನ್ನತ್ತ ಹುದ್ದೆಗೆ ಬಂದು ತಮ್ಮ ಬದುಕನ್ನು ಅಸನಗೊಳಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ77 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ಸಮುದಾಯದ 41 ಸಾಧಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮೈಸೂರಿನ ಕುದೇರು ಮಠಾಧ್ಯಕ್ಷ ಶ್ರೀ ಗುರುಶಾಂತಸ್ವಾಮಿ, ವೀರಶೈವ ಲಿಂಗಾಯತ ನೌಕರರ ಬಸವ ಸೇವಾ ಸಮಿತಿ ಅಧ್ಯಕ್ಷ ಎಸ್.ಮಲ್ಲೇಶಪ್ಪ, ಬಸವ ಸೇವಾ ಪತ್ತಿನ ಸಹಕಾರ ಸಂಘ ಅಧ್ಯಕ್ಷ ನಂಜುಂಡಸ್ವಾಮಿ (ನಂದೀಶ್), ಉಪಾಧ್ಯಕ್ಷ ಎಸ್.ಸೋಮಶೇಖರಪ್ಪ, ಬಸವ ಮಹಾಮನೆ ಟ್ರಸ್ಟ್ ಕಾರ್ಯದರ್ಶಿ ಜಿ.ವೀರಭದ್ರಸ್ವಾಮಿ, ಜಡೇಸ್ವಾಮಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net