ಸತತ ಪ್ರಯತ್ನದಿಂದ ಯಶಸ್ಸು ಕಾಣಲು ಸಾಧ್ಯ: ಎಸ್‌ಬಿಇಟಿ ಅಧ್ಯಕ್ಷ ಡಾ.ಬಿ.ಶಿವಲಿಂಗಯ್ಯ ಅಭಿಮತ

Pratibha Puraskar at Mandavya Integrated Pre Graduation College Mandya
Published on

ಮಂಡ್ಯ: ಒಂದೊಂದು ಗುರಿ ಇಟ್ಟುಕೊಂಡು ಸತತ ಪ್ರಯತ್ನದಿಂದ ಸಾಧನೆ ಮಾಡಿದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಎಸ್‌ಬಿಇಟಿ ಅಧ್ಯಕ್ಷ ಡಾ. ಬಿ. ಶಿವಲಿಂಗಯ್ಯ ಸಲಹೆ ನೀಡದರು.

ನಗರದ ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜು ವತಿಯಿಂದ ಕಾಲೇಜಿನ ಆವರಣದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ವಿಪುಲ ಅವಕಾಶಗಳಿವೆ. ಆದರೆ ಸಾಧನೆಯ ಹಾದಿಯನ್ನು ಬಿಟ್ಟು ಬೇರೆ ಬೇರೆ ಕಡೆಗೆ ಗಮನ ಹರಿಸಿದರೆ - ಮಾತ್ರ ವಿದ್ಯಾರ್ಥಿ ಜೀವನವನ್ನೇ ಹಾಳು - ಮಾಡಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪಾಲಕರು ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಿರಬೇಕೆಂಬ ನಿಟ್ಟಿನಲ್ಲಿ ಒಳ್ಳೆಯ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ಕೊಡಿಸಲು ಮುಂದಾಗುತ್ತಾರೆ. ಆದರೆ ಅವರ ಆಸೆ, ಕನಸು ಗಳನ್ನು ಸಾಕಾರಗೊಳಿಸುವುದು ವಿದ್ಯಾರ್ಥಿ ಗಳ ಕರ್ತವ್ಯವೂ ಆಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಎಲ್ಲವನ್ನೂ ತ್ಯೆಜಿಸಿ ಕೇವಲ ಜ್ಞಾನಾರ್ಜನೆಗೆ ಕಡೆಗೆ ಮಾತ್ರ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು.

ಸಮಾರಂಭ ಉದ್ಘಾಟಿಸಿ ಮಾತನಾಡಿದ ಎಸ್‌ಬಿಇಟಿ ಕಾರ್ಯದರ್ಶಿ ಡಾ.ಮೀರಾ ಶಿವಲಿಂಗಯ್ಯ, ಶಾಲೆ ಮತ್ತು ಕಾಲೇಜಿನ ಕೀರ್ತಿ ಹೆಚ್ಚಿಸುವುದರ ಜತೆಗೆ ಉಪನ್ಯಾಸಕರ ಕೀರ್ತಿಯನ್ನು ಹೆಚ್ಚಿಸಬೇಕು. ವಿದ್ಯಾರ್ಥಿಗಳು ಪಠ್ಯದ ಜತೆಗೆ ಸಾಮಾಜಿಕ ಹೊಣೆಗಾರಿಕೆಯ ಬಗ್ಗೆಯೂ ಗಮನ ಹರಿಸಬೇಕು. ಇದರೊಂದಿಗೆ ಸಂಸ್ಕೃತಿ ಯನ್ನು ಬೆಳೆಸುವುದು ನಿಮ್ಮ ಕರ್ತವ್ಯವಾಗಿದೆ ಎಂದು ಸಲಹೆ ನೀಡಿದರು.

ನಳಂದ ವಿದ್ಯಾಸಂಸ್ಥೆಯ ಅಧ್ಯಕ್ಷ ರಾಮಕೃಷ್ಣ, ಕೊತ್ತತ್ತಿ ವಿದ್ಯಾಗಣಪತಿ ಪ್ರೌಢಶಾಲೆ ಮುಖ್ಯಶಿಕ್ಷಕ ಎಂ.ಸಿ.ರಾಜು, ನಿವೃತ್ತ ಪ್ರಾಂಶುಪಾಲ ರಮೇಶ್, ಮಾಂಡವ್ಯ ಕಾಲೇಜಿನ ಪ್ರಾಧ್ಯಾಪಕರಾದ ಎಂ.ಅವಿನಾಶ್, ಡಾ.ಎಂ.ಪಿ.ಮೋಹನ್, ಡಿ.ಎಸ್.ರಾಘವೇಂದ್ರ, ಮುಖ್ಯಶಿಕ್ಷಕ ಕೆ.ಕೆ.ಚಂದ್ರಶೇಖರ್, ಕಾಲೇಜಿನ ಶೈಕ್ಷಣಿಕ ಪಾಲುದಾರರಾದ ಎಂ.ಎಸ್.ಅರ್ಚನಾ, ಸಿ.ಚನ್ನೇಶ್ ಇತರರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಾಠ್ಯಕ್ರಮ ನಡೆಸಿಕೊಟ್ಟರು. ಇದೇ ವೇಳೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net