ವಿದ್ಯುತ್ ಗುತ್ತಿಗೆದಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Published on

ಮೈಸೂರು: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಜು.7ರಂದು ಸೆಸ್ಕ್ ವ್ಯಾಪ್ತಿಯ ವಿದ್ಯುತ್ ಗುತ್ತಿಗೆದಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾ ಸಮಿತಿ ಕಾರ್ಯದರ್ಶಿ ಬಿ.ಎಂ.ಗಿರೀಶ್‌ಕುಮಾರ್ ತಿಳಿಸಿದರು.
ಕುವೆಂಪುನಗರ ಉದಯರವಿ ರಸ್ತೆಯಲ್ಲಿರುವ ಸಾಮ್ರಾಟ್ ಕಲ್ಯಾಣಮಂಟಪದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಅಂದು ಬೆಳಗ್ಗೆ 10.30ಕ್ಕೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಅಧ್ಯಕ್ಷ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಹಾಗೂ ಸಂಘದ ಗೌರವಾಧ್ಯಕ್ಷ ಸಿ.ರಮೇಶ್ ಉದ್ಘಾಟಿಸಲಿದ್ದಾರೆ. ಜಿಲ್ಲಾಧ್ಯಕ್ಷ ಎಚ್.ಜೆ.ರಾಘವೇಂದ್ರ ಅಧ್ಯಕ್ಷತೆ ವಹಿಸುವರು. ಶಾಸಕ ಟಿ.ಎಸ್.ಶ್ರೀವತ್ಸ, ಮುಡಾ ಅಧ್ಯಕ್ಷ ಕೆ.ಮರಿಗೌಡ ಇತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸಮಿತಿ ಉಪಾಧ್ಯಕ್ಷರಾದ ಎಂ.ಎಸ್.ಮಂಜುನಾಥ್, ಡಿ.ಡಿ.ಶಶಿಧರ್, ಸಂಘಟನಾ ಕಾರ್ಯದರ್ಶಿ ಎಸ್.ಸುಮಂತ್‌ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಮಂಜುನಾಥ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net