

ಮೈಸೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ನ.4 ರಂದು ಸಂಜೆ 4ಕ್ಕೆ ಮಾನಸ ಗಂಗೋತ್ರಿ ಸೆನೆಟ್ ಸಭಾಂಗಣದಲ್ಲಿ ಜಿಲ್ಲೆಯ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಜೆ. ಗೋವಿಂದರಾಜು ಹೇಳಿದರು.
ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ 291 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಇದೇ ಸಂದರ್ಭ ನಿವೃತ್ತಿ ಹೊಂದಲಿರುವ ಮೈಸೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ಜಿ. ಹೇಮಂತ ಕುಮಾರ್ ಅವರನ್ನು ಅಭಿನಂದಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸುವರು, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್. ರಘುನಾಥ್, ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹಾಗೂ ಇತರರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ರೇವಣ್ಣ, ಜಿ. ರೇವಣ್ಣ, ರಮೇಶ್ ಕುಮಾರ್ ಇದ್ದರು.