

ರಾಯಚೂರು: ನಗರದ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಅ.15 ರಂದು ಪ.ಪಂಗಡದ ಸರ್ಕಾರ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಶಾಸಕರು, ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ.ಪಂಗಡಗಳ ಸರ್ಕಾರ ನೌಕರರ ಸಂಘದ ಅಧ್ಯಕ್ಷ ಗಿರಿಯಪ್ಪ ದಿನ್ನಿ ಹೇಳಿದರು.
ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಎಸ್ಸೆಸ್ಸೆಲ್ಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುವುದು. ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದು, ಜಿಲ್ಲೆಯ ಸಂಸದ, ಶಾಸಕರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಮಾಜದ ಶಾಸಕರು ಮತ್ತು ನಿವೃತ್ತ ನೌಕರರನ್ನು ಗೌರವಿಸಲಾಗುವುದು. ವಿದ್ಯಾರ್ಥಿಗಳು ಆಯಾ ತಾಲೂಕು ಪದಾಧಿಕಾರಿಗಳಿಗೆ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಭಾವಚಿತ್ರದೊಂದಿಗೆ ಅ.6ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು.
ಸಂಘದ ಪದಾಧಿಕಾರಿಗಳಾದ ಗೋಪಾಲ ನಾಯಕ, ಈಶಪ್ಪ ನಾಯಕ, ತಿಮ್ಮಣ್ಣ ನಾಯಕ, ಎಂ.ಎಸ್.ಗೋನಾಳ, ಹನುಮಂತಪ್ಪ ಅರೋಲಿ ಇದ್ದರು.