ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

10adarshkdga2 - Copy
Published on

ಮಡಿಕೇರಿ: ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ೨೦೨೧-೨೨ನೇ ಸಾಲಿನ ಮಹಾಸಭೆಯಲ್ಲಿ ೨೦೨೨ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಐವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.


ಶನಿವಾರಸಂತೆಯ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪರವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಪುರಸ್ಕಾರ ನೀಡಲಾಯಿತು.


ಕಳೆದ ಸಾಲಿನ ಆಡಳಿತ ಮಂಡಳಿ ವರದಿಯನ್ನು ಸಂಘದ ಗೌರವ ಕಾರ್ಯದರ್ಶಿ ಎಸ್.ಎಲ್.ಬಸವರಾಜು ಸಭೆಗೆ ವಿವರಿಸಿದರು. ೨೦೨೧-೨೨ನೇ ಸಾಲಿನ ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆಯಲಾಯಿತು. ೨೦೨೨-೨೩ನೇ ಸಾಲಿನ ಸಂಘದ ಅಂದಾಜು ಆಯ-ವ್ಯಯವನ್ನು ನಿರ್ದೇಶಕಿ ಕೆ.ಕೆ.ರೇಣುಕಾ ಮಂಡಿಸಿದರು.


ಸನ್ಮಾನ: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ತಹಶೀಲ್ದಾರ್ ಆಗಿ ನೇಮಕಗೊಂಡ ಒಕ್ಕಲಿಗರ ಶೀತಲ್ ಪ್ರಕಾಶ್, ಸಿವಿಲ್ ಜಡ್ಜ್ ರಂಜಿತಾ, ರಾಜ್ಯ ಮಟ್ಟದ ಕ್ರೀಡೆಯಲ್ಲಿ ಬಹುಮಾನ ಪಡೆದ ಎ.ಎಸ್.ಗಗನ್ ಅವರನ್ನು ಯುವ ಮುಖಂಡ ಡಾ.ಮಂಥರ್ ಗೌಡ ಅವರಿಂದ ಸನ್ಮಾನಿಸಿ ಗೌರವಿಸಲಾಯಿತು. ಕಳೆದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಿದಂತೆ ಸಂಘದ ಸದಸ್ಯರುಗಳ ಗುರುತಿನ ಚೀಟಿಯನ್ನು ಮಾಜಿ ಸಚಿವ ಬಿ.ಎ.ಜೀವಿಜಯ ಬಿಡುಗಡೆ ಮಾಡಿದರು.


ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪರವರು ಒಕ್ಕಲಿಗ ಸಮುದಾಯದ ಬಲವರ್ಧನೆ ಕುರಿತು ಮಾತನಾಡಿದರು. ವೇದಿಕೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಸೋಮವಾರಪೇಟೆ ತಾಲೂಕು ಸಮಿತಿ ಅಧ್ಯಕ್ಷ ಎ.ಆರ್.ಮುತ್ತಣ್ಣ, ಮಡಿಕೇರಿ ತಾಲೂಕು ಸಮಿತಿ ಅಧ್ಯಕ್ಷ ವಿ.ಜಿ.ಮೋಹನ್, ಉಪಾಧ್ಯಕ್ಷರಾದ ವಿ.ಪಿ.ಸುರೇಶ್, ಪಿ.ಕೆ.ರವಿ, ಕೆ.ಪಿ.ನಾಗರಾಜು, ಪ್ರಮುಖರಾದ ಕೆ.ಪಿ.ಚಂದ್ರಕಲಾ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಮೃತಪಟ್ಟ ಸದಸ್ಯರುಗಳಿಗೆ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net