

ಬಾಗಲಕೋಟೆ: ಬಾಗಲಕೋಟೆ ತಾಲೂಕಾ ಬಣಜಿಗ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಆ.13 ರಂದು ಬೆಳಗ್ಗೆ 10.30 ಗಂಟೆಗೆ ವಿದ್ಯಾಗಿರಿಯ ಅಥಣಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮ ಸ್ವಾಗತ ಸಮಿತಿಯ ಅಧ್ಯಕ್ಷ ಆನಂದ ಜಿಗಜಿನ್ನಿ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಬಾಗಲಕೋಟೆ ತಾಲೂಕಾ ಘಟಕದ ಆಶ್ರಯದಲ್ಲಿ ಅಂದು ಬೆಳಗ್ಗೆ 10.30 ಗಂಟೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಗಾವಿಯ ಅಂಕಲಗಿಯ ಅಡವಿ ಸಿದ್ದೇಶ್ವರ ಸಂಸ್ಥಾನ ಮಠದ ಅಮರಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ ಸಂಗಪ್ಪ ಆಲೂರ ಉದ್ಘಾಟಸಲಿದ್ದಾರೆ.
ಹೀಳಿ ಸಾಹಿತಿ ಅಶೋಕ ಹಂಚಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು. ಬಣಜಿಗ ಸಮಾಜದ ತಾಲೂಕಾಧ್ಯಕ್ಷ ಬಸವರಾಜ ಎಸ್.ಶೀಲವಂತ ಅಧ್ಯಕ್ಷತೆ ವಹಿಸಲಿದ್ದಾರೆ.
ಇದನ್ನೂ ಓದಿ: ಬಾವಿಯಲ್ಲಿ ಮೊಸಳೆ ಮರಿಗಳು ಪತ್ತೆ
ಮುಖ್ಯ ಅತಿಥಿಗಳಾಗಿ ಶಾಸಕ ಎಚ್.ವೈ. ಮೇಟಿ, ಬೀಳಗಿ ಕ್ಷೇತ್ರದ ಶಾಸಕ ಜೆ.ಟಿ.ಪಾಟೀಲ ಆಗಮಿಸಲಿದ್ದಾರೆ.
ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾ ಗೌರವಾಧ್ಯಕ್ಷ ಮಲ್ಲಪ್ಪಣ್ಣ ಎಸ್. ಆರಬ್ಬಿ, ಬಣಜಿಗ ಸಮಾಜದ ಜಿಲ್ಲಾಧ್ಯಕ್ಷ ಶರಣಪ್ಪ ಗುಳೇದ, ಜಿಲ್ಲಾ ಉಪಾಧ್ಯಕ್ಷ ರವಿ ಕುಮಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತು ಜೋಳದ ಉಪಸ್ಠಿತರಿರುವರು ಎಂದರು.
ಸಮಾಜದ ಮಕ್ಕಳು ಉತ್ತಮ ಸಂಸ್ಕಾರವಂತರಾಗಲು ನೆರವಾಗಲು ಬರುವ ದಿನಗಳಲ್ಲಿ ಸಮಾಜದ ಆಚಾರ, ವಿಚಾರಗಳ ಕುರಿತು, ಪೂಜೆ, ಪೂನಸ್ಕಾರದ ಬಗ್ಗೆ ಶಿಬಿರ ಹಮ್ಮಿಕೊಳ್ಳುವುದು ಸೇರಿದಂತೆ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.
ಬಣಜಿಗ ಸಮಾಜದ ತಾಲೂಕಾಧ್ಯಕ್ಷ ಬಸವರಾಜ ಶೀಲವಂತ ಮಾತನಾಡಿ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸಮಾಜದ ಆಚಾರ-ವಿಚಾರಗಳ ಕುರಿತು ಕಾರ್ಯಕ್ರಮಗಳನ್ನು ತಾಲೂಕಿನಾದ್ಯಂತ ಆಯೋಜಿಸಲಾಗುವುದು ಎಂದರು.
ಬಡ ಪ್ರತಿಭಾವಂತ ಮಕ್ಕಳಿಗೆ ನೆರವು, ಆರೋಗ್ಯ, ರಕ್ತದಾನ, ವ್ಯಕ್ತಿತ್ವ ವಿಕಸನ ಶಿಬಿರಗಳನ್ನು, ಅಲ್ಲದೇ ಯುವಕರಿಗೆ ಸ್ವಾವಲಂಬಿ ಬದುಕು ಸಾಗಿಸಲು ಅಗತ್ಯ ತರಬೇತಿ, ಕೈಗಾರಿಕಾ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು.
ಇದನ್ನೂ ಓದಿ: ಮಕ್ಕಳಲ್ಲಿ ಹಬ್ಬುತ್ತಿರುವ ಮದ್ರಾಸ್ ಐ
ಬಣಜಿಗ ಸಮಾಜದ ತಾಲೂಕಾ ಗೌರವಾಧ್ಯಕ್ಷ ಮಲ್ಲಪ್ಪಣ್ಣ ಎಸ್. ಆರಬ್ಬಿ, ಜಿಲ್ಲಾಧ್ಯಕ್ಷ ಶರಣಪ್ಪ ಗುಳೇದ, ಜಿಲ್ಲಾ ಉಪಾಧ್ಯಕ್ಷ ರವಿ ಕುಮಟಗಿ, ಮುರುಗೇಶ ಶಿವನಗುತ್ತಿ, ವಿನಾಯಕ ನಾವಲಗಿ ಇತರರು ಉಪಸ್ಠಿತರಿದ್ದರು.