ಪ್ರತಿಭಾ ಪುರಸ್ಕಾರ ಸೆ.3ರಂದು

CLK SABHE 20
Published on

ಚಳ್ಳಕೆರೆ: ಪರಿಶಿಷ್ಟ ಜಾತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಮೂಲಕ ಗೌರವಿಸುವ ಮೂಲಕ ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ತರುವ ಕೆಲಸವನ್ನು ಮಾಡಲಾಗುವುದು ಎಂದು ಮಾದಿಗ ನೌಕರರ ಸಾಂಸ್ಕೃತಿಕ ಸಂಘದ ತಾಲೂಕಾಧ್ಯಕ್ಷ ಡಿ.ದಯಾನಂದ ಹೇಳಿದರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸುವ ಹಿನ್ನೆಲೆಯಲ್ಲಿ ಭಾನುವಾರ ನಗರದ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಸೆಪ್ಟೆಂಬರ್ 3ರಂದು ಚಳ್ಳಕೆರೆ ನಗರದಲ್ಲಿ ಆಯೋಜಿಸಲಿದ್ದು, ಕೋಡಿಹಳ್ಳಿ ಮಠದ ಶ್ರೀ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ, ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಸಚಿವರಾದ ಕೆ.ಎಚ್. ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಡಿ.ಸುಧಾಕರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕರಾದ ಟಿ.ರಘುಮೂರ್ತಿ, ಕೆ.ಸಿ. ವೀರೇಂದ್ರ ಪಪ್ಪಿ ಭಾಗವಹಿಸಲಿದ್ದಾರೆ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಟಿ.ಶ್ರೀನಿವಾಸನ್, ಜಂಟಿ ಕಾರ್ಯದರ್ಶಿ ಎಚ್.ಹನುಮಂತಪ್ಪ, ಖಜಾಂಚಿ ಡಿ.ಟಿ.ಹನುಮಂತರಾಯ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net