ಜು.7ರಂದು ನಗರದಲ್ಲಿ ಪ್ರತಿಭಾ ಪುರಸ್ಕಾರ: ಅಂಬೇಡ್ಕರ್ ವಾರಿಯರ್ಸ್‌ ಅಧ್ಯಕ್ಷ ಎಚ್.ಜಿ.ಗಂಗರಾಜು ಮಾಹಿತಿ

Pratibha Puraskar Press Conference Mandya
Published on

ಮಂಡ್ಯ: ಜಿಲ್ಲೆಯಲ್ಲಿ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರಿಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಎಸ್ಸಿ, ಎಸ್ಸಿ, ಒಬಿಸಿ ಮತ್ತು ಅಂಗವಿಕಲ ವಿದ್ಯಾರ್ಥಿಗಳಿಗೆ ನಗರದಲ್ಲಿ ಜು.7ರಂದು ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್ಸ್‌ ಸಂಘಟನೆ ಅಧ್ಯಕ್ಷ ಎಚ್.ಜಿ.ಗಂಗರಾಜು ತಿಳಿಸಿದರು.

ನಗರದ ಪಿಇಎಸ್ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ಆಯೋಜಿಸಿರುವ ಸಮಾರಂಭವನ್ನು ಅಂದು ಬೆಳಗ್ಗೆ 11ಕ್ಕೆ ಶಾಸಕ ರವಿಕುಮಾರ್ ಗಣಿಗ ಉದ್ಘಾಟಿಸುವರು. ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಡಾ.ಕಲ್ಯಾಣಸಿರಿ ಭಂತೇಜಿ ಸಾನಿಧ್ಯ ವಹಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಮಾರಂಭದಲ್ಲಿ 100 ಜನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲು ನಿರ್ಧರಿಸಲಾಗಿದೆ. ಇದೇ ವೇಳೆ ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕ ಡಾ.ಪ್ರೊ.ಭರತ್‌ರಾಜ್ ಅವರು ಮುಖ್ಯ ಭಾಷಣ ಮಾಡುವರು. ಗಾಮನಹಳ್ಳಿ ಸ್ವಾಮಿ ಮತ್ತು ತಂಡದವರು ಗೀತಗಾಯನ ಕಾರ್ಯಕ್ರಮ ಪ್ರಸ್ತುತಪಡಿಸುವರು. ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ರಾಜಮುರ್ತಿ, ಡಿಡಿಪಿಐ ಎಚ್.ಶಿವರಾಮೇಗೌಡ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರೆಗೋಡು, ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಪ್ರಗತಿಪರ ಚಿಂತಕ ಸಂಪತ್‌ಕುಮಾರ್, ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಭಾಗವಹಿಸುವರು ಎಂದು ವಿವರಿಸಿದರು.

ಸಂಘಟನೆ ಪದಾಧಿಕಾರಿಗಳಾದ ಮುತ್ತುರಾಜು, ಎಂ.ನಿಂಗಯ್ಯ, ಚಿಕ್ಕಮಂಡ್ಯ ವೇಣುಗೋಪಾಲ್, ಎಂ.ಬಿ.ರಮೇಶ್, ಮಹದೇವು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net