ಇಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Published on

ಬೆಟ್ಟದಪುರ: ಅಮೋಘವರ್ಷ ಅಮೃತ ವರ್ಷಿಣಿ ಸೇವಾ ಪ್ರತಿಷ್ಠಾನದ ವತಿಯಿಂದ 6ನೇ ವರ್ಷದ ಸಂಸ್ಮರಣೆಯ ಅಂಗವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜುಲೈ 12ರಂದು ಬೆಟ್ಟದಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಆಧ್ಯಕ್ಷ ಗೊರಳ್ಳಿ ಜಗದೀಶ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಕನ್ನಡ ಭಾಷಾ ವಿಷಯದಲ್ಲಿ 125 ಅಂಕಗಳನ್ನು ಪಡೆದ ತಾಲೂಕಿನ ಖಾಸಗಿ, ಸರ್ಕಾರಿ ಶಾಲೆಯ 40 ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪುರಸ್ಕಾರ, ಅಂಗವಿಕಲ ವಿದ್ಯಾರ್ಥಿ ಅನುಶ್ರೀಗೆ ಪೀಠೋಪಕರಣ ವಿತರಣೆ, ಹಾಸನದ ಹಾಸನಾಂಬ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯೆದ್ಯಕೀಯ ನಿರ್ದೇಶಕ ಡಾ.ಬಸವರಾಜು ಹಾಗೂ ಮೈಸೂರಿನ ಮಹಾರಾಜ ಕಾಲೇಜು ಜಾನಪದ ವಿಭಾಗದ ವಿಜಯಲಕ್ಷ್ಮೀ ಮ.ನಾ.ಪುರ ಅವರಿಗೆ ಅಮೋಘವರ್ಷ ಅಮೃತವರ್ಷಿಣಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕುಂಜಿ ಅಹಮದ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ವೈ.ಡಿ. ರಾಜಣ್ಣ, ಚಂದ್ರಶೇಖರ್, ಸುನಿಲ್‌ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು, ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net