ಶೈಕ್ಷಣಿಕ ಸಾಧನೆಗೆ ಪ್ರೇರಣೆಯಾಗಲಿ ಪುರಸ್ಕಾರ ...

Yashpal Lead
Published on

ಶಾಸಕ ವೇದವ್ಯಾಸ್​ ಕಾಮತ್​ ಆಶಯ

650 ಮಕ್ಕಳಿಗೆ ವಿದ್ಯಾರ್ಥಿ ವೇತನ ಪ್ರದಾನ

ವಿಜಯವಾಣಿ ಸುದ್ದಿಜಾಲ ಉಡುಪಿ

ದಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್​ ಹಾಗೂ ಮಹಾಲಕ್ಷ್ಮೀ ಕೋ-ಆಪ್​ ಬ್ಯಾಂಕ್​ ಎರಡೂ ಸಹ ಯಶ್​ಪಾಲ್​ ಸುವರ್ಣ ನೇತೃತ್ವದಲ್ಲಿ ಯಶಸ್ವಿ ಸಹಕಾರಿ ಸಂಸ್ಥೆಯಾಗಿ ಮುನ್ನಡೆಯುತ್ತಿದೆ. ಎರಡೂ ಸಂಸ್ಥೆಯ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿವರ್ಷವೂ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದಾರೆ. ಅದನ್ನು ಸ್ವೀಕರಿಸಿದ ಮಕ್ಕಳಿಗೆ ಶೈಕ್ಷಣಿಕ ಸಾಧನೆಗೆ ಇನ್ನಷ್ಟು ಪ್ರೇರಣೆ ಸಿಗಲಿ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್​ ಆಶಯ ವ್ಯಕ್ತಪಡಿಸಿದರು.

ಮಂಗಳೂರಿನ ಉರ್ವ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್​ ಹಾಗೂ ಮಹಾಲಕ್ಷ್ಮೀ ಬ್ಯಾಂಕ್​ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 650 ವಿದ್ಯಾರ್ಥಿಗಳಿಗೆ ಫೆ.15ರಂದು ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ದೇಶದ ಅಭಿವೃದ್ಧಿಗೆ ಕೈಜೋಡಿಸಿ

Yashpal-2 (1)
ಅಧ್ಯಕ್ಷತೆಯನ್ನು ವಹಿಸಿದ್ದ ಮೀನು ಮಾರಾಟ ಫೆಡರೇಷನ್​ ಮತ್ತು ಮಹಾಲಕ್ಷ್ಮೀ ಬ್ಯಾಂಕ್​ ಅಧ್ಯಕ್ಷ, ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಮಾತನಾಡಿ, 15 ವರ್ಷದಿಂದ ಫೆಡರೇಷನ್​ ಮೂಲಕ ನಿರಂತರವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಉತ್ತಮ ಸಾಧನೆಯ ಮೂಲಕ ದೇಶದ ಅಭಿವೃದ್ಧಿಗೆ ಕೈಜೋಡಿಸುವ ಸಂಕಲ್ಪ ಮಾಡಬೇಕು ಎಂದರು.

ಮಂಗಳೂರು ಮೇಯರ್​ ಮನೋಜಕುಮಾರ್​ ಮಾತನಾಡಿ, ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Yashpal-3
ದ.ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್​ ಬೆಂಗ್ರೆ, ದ.ಕ. ಜಿಲ್ಲಾ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಭರತ್​ ಉಳ್ಳಾಲ, ಬಿಜೆಪಿ ಮಂಗಳೂರು ನಗರ ದಕ್ಷಿಣ ಉಪಾಧ್ಯಕ್ಷ ಗೌತಮ್​ ಕೋಡಿಕಲ್​, ಮಂಗಳೂರು ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಲೋಕೇಶ್​ ಸುವರ್ಣ, ಮಹಾನಗರ ಪಾಲಿಕೆ ಸದಸ್ಯೆ ನಯನಾ ಆರ್​. ಕೋಟ್ಯಾನ್​, ಮಲ್ಪೆ ಯಾಂತ್ರಿಕ ಟ್ರಾಲ್​ ದೋಣಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್​, ದಕ್ಷಿಣ ಕನ್ನಡ ಮೊಗವೀರ ಮಹಿಳಾ ಸಂಘದ ಅಧ್ಯೆ ಉಷಾರಾಣಿ, ಮಹಾಲಕ್ಷ್ಮೀ ಬ್ಯಾಂಕ್​ ವ್ಯವಸ್ಥಾಪಕ ನಿರ್ದೇಶಕ ಶರತ್​ಕುಮಾರ್​ ಶೆಟ್ಟಿ ಉಪಸ್ಥಿತರಿದ್ದರು.

ವಿಜೇತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಫೆಡರೇಷನ್​ನ ವ್ಯವಸ್ಥಾಪಕ ನಿರ್ದೇಶಕಿ ದರ್ಶನಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net